ಬಿಜೆಪಿಯ ‘ರಾವಣ’ ಪೋಸ್ಟರ್‌ಗೆ ಕಾಂಗ್ರೆಸಿನಿಂದ ‘ಅದಾನಿಯ ಕೈಗೊಂಬೆ’ ತಿರುಗೇಟು

Date:

Advertisements

ರಾಹುಲ್ ಗಾಂಧಿಯನ್ನು ರಾವಣನಂತೆ ಬಿಂಬಿಸುವ ಪೋಸ್ಟರ್‌ಅನ್ನು ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯನ್ನು ಕೈ ಪಕ್ಷ ತರಾಟೆಗೆ ತೆಗೆದುಕೊಂಡಿದೆ. ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಜೈರಾಮ್ ರಮೇಶ್, ರಾಹುಲ್‌ ಗಾಂಧಿ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶವನ್ನು ಈ ಪೋಸ್ಟರ್ ಹೊಂದಿದೆ ಎಂದು ಆರೋಪಿಸಿದ್ದಾರೆ.

“ರಾಹುಲ್ ಗಾಂಧಿಯನ್ನು ರಾವಣನಂತೆ ಬಿಂಬಿಸುವ ಗ್ರಾಫಿಕ್‌ನ ನಿಜವಾದ ಉದ್ದೇಶವೇನು? ಇದು ಕಾಂಗ್ರೆಸ್ ಸಂಸದ ಮತ್ತು ಪಕ್ಷದ ಮಾಜಿ ಅಧ್ಯಕ್ಷರ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಮತ್ತು ಪ್ರಚೋದಿಸುವ ಉದ್ದೇಶವನ್ನು ಹೊಂದಿದೆ, ಅವರ ತಂದೆ ಮತ್ತು ಅಜ್ಜಿಯನ್ನು ಹತ್ಯೆ ಮಾಡಲಾಗಿದೆ. ನಾವು ಇದಕ್ಕೆಲ್ಲ ಹೆದರುವುದಿಲ್ಲ” ಎಂದು ಜೈರಾಮ್‌ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ಪೋಸ್ಟರ್‌ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಗೌರವಾನ್ವಿತ ನರೇಂದ್ರ ಮೋದಿ ಮತ್ತು ಜೆಪಿ ನಡ್ಡಾ ಅವರೇ, ನೀವು ರಾಜಕೀಯ ಮತ್ತು ಚರ್ಚೆಯನ್ನು ಯಾವ ಮಟ್ಟಕ್ಕೆ ಕೊಂಡೊಯ್ಯಲು ಬಯಸುತ್ತೀರಿ? ಹಿಂಸಾತ್ಮಕ ಮತ್ತು ಪ್ರಚೋದನಕಾರಿ ಟ್ವೀಟ್‌ಗಳನ್ನು ನೀವು ಒಪ್ಪುತ್ತೀರಾ? ನಿಮ್ಮ ಪಕ್ಷದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಈ ಪೋಸ್ಟ್ ಮಾಡಲಾಗಿದೆಯೇ? ನೀವು ಹೇಳಿದ ಭರವಸೆಗಳಂತೆಯೇ ನೀವು ಮಾಡಿದ ಪ್ರಮಾಣಗಳನ್ನು ಮರೆತುಬಿಟ್ಟಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜೈಲಿನಲ್ಲಿರುವ ಮಾನವ ಹಕ್ಕುಗಳ ಹೋರಾಟಗಾರ್ತಿ ನರ್ಗೀಸ್ ಮೊಹಮ್ಮದಿ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

ಮೊದಲಿಗೆ ಟ್ವಿಟರ್‌ನಲ್ಲಿ ಪ್ರಧಾನಿ ಮೋದಿಯವರನ್ನು ದೊಡ್ಡ ಸುಳ್ಳುಗಾರ” ಎಂದು ಟೀಕಿಸುವ ಮೂಲಕ ಕಾಂಗ್ರೆಸ್ ಬಿಜೆಪಿ ಪೋಸ್ಟರ್ ವಿವಾದ ಪ್ರಾರಂಭವಾಯಿತು. ಬಳಿಕ ಚಲನಚಿತ್ರದ ಪೋಸ್ಟರ್ ಹೋಲುವಂತೆ “ಪ್ರಧಾನಿ ನರೇಂದ್ರ ಮೋದಿ ಜುಮ್ಲಾ ಬಾಯ್” ಸೇರಿದಂತೆ ಸರಣಿ ಪೋಸ್ಟ್‌ಗಳನ್ನು ಪೋಸ್ಟ್ ಮಾಡಲಾಯಿತು.

ಬಳಿಕ ಕಾಂಗ್ರೆಸ್‌ಗೆ ತಿರುಗೇಟು ನೀಡಲು ಬಿಜೆಪಿ ರಾಹುಲ್ ಗಾಂಧಿಯನ್ನು ಆಧುನಿಕ ರಾವಣನಿಗೆ ಹೋಲಿಸಿ ಪೋಸ್ಟರ್ ಹಂಚಿಕೊಂಡಿತು. ಭಾರತ ಅಪಾಯದಲ್ಲಿದೆ – ಕಾಂಗ್ರೆಸ್‌ನ ನಿರ್ಮಾಣ, ಜಾರ್ಜ್ ಸೊರೊಸ್ ನಿರ್ದೇಶಿಸಿದ್ದಾರೆ, ಅವನು ದುಷ್ಪ ಧರ್ಮ ವಿರೋಧಿ ರಾಮನ ವಿರೋಧಿ, ಅವನ ಗುರಿ ಭಾರತವನ್ನು ನಾಶಮಾಡುವುದು” ಎಂದು ಬರೆಯಲಾಗಿತ್ತು.

ರಾಹುಲ್ ಗಾಂಧಿಯನ್ನು “ಹೊಸ ಕಾಲದ ರಾವಣ’ ಎಂದು ತೋರಿಸುವ ಬಿಜೆಪಿ ಟ್ವೀಟ್‌ಗೆ ಕಾಂಗ್ರೆಸ್‌ನಿಂದ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿಯನ್ನು “ಅದಾನಿಯ ಗೊಂಬೆ’ ಎಂದು ಶೀರ್ಷಿಕೆ ಹೊಂದಿರುವ ಪೋಸ್ಟರ್ ಹಂಚಿಕೊಂಡು ಕೌಂಟರ್‌ ನೀಡಿದೆ. ಸರ್ಕಾರವನ್ನು ಅದಾನಿ ತಮ್ಮ ಹಿಡಿತದಲ್ಲಿಟ್ಟುಕೊಂಡಿದ್ದಾರೆ ಎಂದು ಪರೋಕ್ಷವಾಗಿ ಪೋಸ್ಟರ್ ಮೂಲಕ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X