ಬಳ್ಳಾರಿ | ಅ.12, 13ರಂದು ಚಾರ್ಟರ್ಡ್ ಅಕೌಂಟೆಂಟ್‌ಗಳ 55ನೇ ಪ್ರಾದೇಶಿಕ ಸಮ್ಮೇಳನ

Date:

Advertisements

ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆಯ (ಐಸಿಎಐ) ದಕ್ಷಿಣ ಭಾರತ ಪ್ರಾಂತೀಯ ಪರಿಷತ್ತಿನ (ಎಸ್‌ಐಆರ್‌ಸಿ) ವತಿಯಿಂದ ಬಳ್ಳಾರಿ ಶಾಖೆಯ ಆಶ್ರಯದಲ್ಲಿ 2023ರ ಅಕ್ಟೋಬರ್ 12 ಮತ್ತು 13ರಂದು ಎರಡು ದಿನಗಳ 55ನೇ ದಕ್ಷಿಣ ಭಾರತ ಮಟ್ಟದ ಚಾರ್ಟರ್ಡ್ ಅಕೌಂಟೆಂಟ್‌ಗಳ ಸಮಾವೇಶ- “ಜ್ಞಾನ ಸಂಪನ್ನ-ಅರಿವಿನಿಂದ ವಿಕಾಸದೆಡೆಗೆ” ಕಾರ್ಯಕ್ರಮ ಜಿಲ್ಲೆಯ ಹೊಸಪೇಟೆಯಲ್ಲಿ ಏರ್ಪಡಿಸಲಾಗಿದೆ ಎಂದು ಸಿರಿಗೇರಿ ಪನ್ನರಾಜ್ ತಿಳಿಸಿದ್ದಾರೆ.

ಬಳ್ಳಾರಿ ನಗರದಲ್ಲಿ ಸುದ್ದಿಗೋಷಿಟಿ ನಡೆಸಿ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅ.12ರಂದು ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್, ಪುವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ ಲಾಡ್ ಮತ್ತು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ಎಲ್ಲ ಶಾಸಕರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ” ಎಂದು ಹೇಳಿದರು.

“ಹೊಸಪೇಟೆ ಶಾಸಕ ಎಚ್ ಆರ್ ಗವಿಯಪ್ಪ ಅಧ್ಯಕ್ಷತೆ ವಹಿಸುವರು. ಐಸಿಎಐ ಅಧ್ಯಕ್ಷ ಸಿಎ ಅನಿಕೇತ್ ಎಸ್ ತಲಾಟ ಮತ್ತು ಉಪಾಧ್ಯಕ್ಷ ಸಿ ಎ ರಂಜಿತ್‌ ಅಗರವಾಲ್ ಅವರೂ ಪಾಲ್ಗೊಳ್ಳುವರು” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಗ್ರಾ. ಪಂಚಾಯಿತಿ ಸದಸ್ಯನಿಂದ ವ್ಯಕ್ತಿಗೆ ಅವಮಾನ

ಈ ಸಂದರ್ಭದಲ್ಲಿ ಸಂಸ್ಥೆಯ ಬಳ್ಳಾರಿ ಶಾಖೆಯ ಅಧ್ಯಕ್ಷ ನಾಗನಗೌಡ, ಉಪಾಧ್ಯಕ್ಷ ವೆಂಕಟ್ ನಾರಾಯಣ, ಕಾರ್ಯದರ್ಶಿಗಳಾದ ಪುರುಷೋತ್ತಮ ರೆಡ್ಡಿ, ಸ್ವಪ್ನ ಪ್ರಿಯ ಸೇರಿದಂತೆ ಇತರರು ಇದ್ದರು.

ವರದಿ : ರಾಧಾಕೃಷ್ಣ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X