ಶಿವಮೊಗ್ಗ | ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್

Date:

Advertisements

ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಮುಖಂಡ ಅರುಣ್ ​ಕುಮಾರ್ ಪುತ್ತಿಲ ವಿರುದ್ಧ ಶಿವಮೊಗ್ಗದಲ್ಲಿ ಎಫ್‌ಐಆರ್ ದಾಖಲಾಗಿದೆ.

ನಿನ್ನೆ ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ ನೀಡಿದ್ದ ಅರುಣ್​ಕುಮಾರ್ ಪುತ್ತಿಲ, ನಿಷೇಧಾಜ್ಞೆಯ ನಡುವೆಯೇ ಪ್ರಚೋದನಕಾರಿ‌ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರು ಸ್ವಯಂಪ್ರೇರಿತ(ಸುವೋ-ಮೋಟೋ) ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಗಿಗುಡ್ಡದಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ಶುಕ್ರವಾರ ಅಲ್ಲಿಗೆ ಭೇಟಿ ನೀಡಿದ್ದ ಪುತ್ತಿಲ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡುತ್ತಿದ್ದರು. ಈ ವೇಳೆ, “ಹಿಂದೂಗಳು ಸ್ಕ್ರೂಡ್ರೈವರ್, ಸ್ಯ್ಪಾನರ್ ಬಿಟ್ಟು ತಲವಾರುಗಳಿಗೆ ಪೂಜೆ ಮಾಡಬೇಕು. ಅಗತ್ಯ ಬಿದ್ದರೆ ಶಸ್ತ್ರಾಸ್ತ್ರ ಮೂಲಕ ಪ್ರತಿಕ್ರಿಯೆ ಕೊಡಲು ಸಿದ್ಧರಾಗಬೇಕು’ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

Advertisements

ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 153A ಕಾಯ್ದೆಯಡಿ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X