ದಾಸೋಹ ಸಂಸ್ಕಾರದ ಸಿದ್ದರಾಮಯ್ಯ ಸರ್ವರ ಮುಖ್ಯಮಂತ್ರಿ : ಹೆಚ್‌ ಸಿ ಮಹದೇವಪ್ಪ

Date:

Advertisements
  • ‘ಶರಣ ಸಂಸ್ಕೃತಿಯ ಆಶಯ ಸಿದ್ದರಾಮಯ್ಯ ಅವರ ಬದುಕಿನಲ್ಲಿದೆ’
  • ‘ಹೀಗಾಗಿ ಬಸವ ಜಯಂತಿಯಂದೇ ಸಿಎಂ ಪ್ರಮಾಣವಚನ ಸ್ವೀಕರಿಸಿದರು’

ವಚನ ಕ್ರಾಂತಿ ಮತ್ತು ಶರಣ ಸಂಸ್ಕೃತಿಯ ಆಶಯಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದುಕು ಹಾಗೂ ಆಚರಣೆಗಳಲ್ಲಿ ಎದ್ದು ಕಾಣುತ್ತದೆ. ದಾಸೋಹ ಸಂಸ್ಕಾರದ ಸಿದ್ದರಾಮಯ್ಯ ಅವರು ಸರ್ವರ ಮುಖ್ಯಮಂತ್ರಿ ಎಂದು ಸಮಾಜ ಕಲ್ಯಾಣ ಸಚಿವ ಹೆಚ್‌ ಸಿ ಮಹದೇವಪ್ಪ ಬಣ್ಣಿಸಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘ ಸಂಸ್ಥೆಗಳು ಹಾಗೂ ಮೈಸೂರಿನ ಬಸವ ಬಳಗಗಳ ಒಕ್ಕೂಟ ಮೈಸೂರು ಕಲಾಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶರಣ ಸಂಸ್ಕೃತಿಯನ್ನು ತಮ್ಮ ಬದುಕಿನ ಆಚರಣೆಯನ್ನಾಗಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಬಸವ ಜಯಂತಿಯ ದಿನವನ್ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಯ್ಕೆ ಮಾಡಿಕೊಂಡರು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಶ್ಯಾಮನೂರು ಶಿವಶಂಕರಪ್ಪ ಪ್ರಶ್ನೆಗೆ ಸಿಎಂ ಉತ್ತರಿಸಲಿ : ಬೊಮ್ಮಾಯಿ ಆಗ್ರಹ

“ಶರಣ ಸಂಸ್ಕೃತಿಯ ಅನುಯಾಯಿಗಳಾದ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿಯಾದ ಬಳಿಕ ಮೊದಲಿಗೆ ಸಹಿ ಹಾಕಿದ್ದು ದಾಸೋಹ ಸಂಸ್ಕೃತಿಯ ಅನ್ನ ಭಾಗ್ಯ ಯೋಜನೆಗೆ. ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋವನ್ನು ಕಡ್ಡಾಯಗೊಳಿಸಿದ್ದು ಸಿದ್ದರಾಮಯ್ಯ ಅವರು” ಎಂದು ಹೇಳಿದರು.

ಸಚಿವ ಹೆಚ್.ಸಿ. ಮಹದೇವಪ್ಪ ಅವರು “12ನೇ ಶತಮಾನದ ಶರಣ ದಂಪತಿಗಳು” ಕೃತಿಯನ್ನು ಬಿಡುಗಡೆ ಮಾಡಿದರು. ಬಸವೇಶ್ವರ ಪುತ್ಥಳಿ ದಾನ ಮಾಡಿದ ನೈಸ್ ಸಂಸ್ಥೆಯ ಮುಖ್ಯಸ್ಥರಾದ ಅಶೋಕ್ ಖೇಣಿ, ಶಾಸಕರುಗಳಾದ ಮಾಜಿ ಸಚಿವ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ್, ಜಿ.ಡಿ.ಹರೀಶ್ ಗೌಡ, ಹೆಚ್.ಎಂ.ಗಣೇಶ್ ಪ್ರಸಾದ್, ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಡಾ. ತಿಮ್ಮಯ್ಯ ಸೇರಿ ಮಾಜಿ ಶಾಸಕರು ಹಾಗೂ ನಾಯಕರುಗಳು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X