ಮೈಸೂರು ದಸರಾ | ಯೂನಿಟಿ ಮಾಲ್‌ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಸಚಿವರು

Date:

Advertisements
  • ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಕ್ಕಾಗಿ ಶಾಶ್ವತ ‘ಯೂನಿಟಿ ಮಾಲ್‌’
  • ಸುಮಾರು 6.5 ಎಕರೆ ಜಾಗದಲ್ಲಿ ವ್ಯವಸ್ಥಿತವಾಗಿ ಕಟ್ಟಡ ನಿರ್ಮಿಸಲು ರೂಪುರೇಷೆ

ರಾಜ್ಯದ ಎಲ್ಲ ಜಿಲ್ಲೆಯ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಕ್ಕಾಗಿ ಶಾಶ್ವತ ‘ಯೂನಿಟಿ ಮಾಲ್‌’ ನಿರ್ಮಿಸುವ ಸಂಬಂಧ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ  ಹೆಚ್.ಸಿ.ಮಹದೇವಪ್ಪ ಹಾಗೂ ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಶನಿವಾರ ದಸರಾ ವಸ್ತುಪ್ರದರ್ಶನ ಮೈದಾನದ ಎಂ.ಜಿ.ರಸ್ತೆ ದ್ವಾರದ ಬಳಿ ಸ್ಥಳ ಪರಿಶೀಲಿಸಿದರು.

ಈ ವೇಳೆ ಯೂನಿಟಿ ಮಾಲ್ ನಿರ್ಮಿಸುವ ನೀಲಿನಕ್ಷೆಯನ್ನು ವೀಕ್ಷಿಸಿದ ಸಚಿವರು, ದಸರಾ ವಸ್ತುಪ್ರದರ್ಶನ ಮೈದಾನದಲ್ಲಿ ಗುರುತಿಸಲಾಗಿರುವ ಸುಮಾರು 6.5 ಎಕರೆ ಜಾಗದಲ್ಲಿ ವ್ಯವಸ್ಥಿತವಾಗಿ ಕಟ್ಟಡ ನಿರ್ಮಿಸುವ ರೂಪುರೇಷೆಗಳನ್ನು ಕುರಿತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದರು.

“ರಾಜ್ಯದ ಉತ್ಪನ್ನಗಳಿಗೆ ಪ್ರಮುಖ ವಾಣಿಜ್ಯ ಕೇಂದ್ರವಾಗಿ ಕಾರ್ಯನಿರ್ವಹಿಸಲಿರುವ ಯೂನಿಟಿ ಮಾಲ್‌ ಅನ್ನು ಅಚ್ಚುಕಟ್ಟಾಗಿ ನಿರ್ಮಾಣ ಮಾಡಬೇಕು. ಇದು ಪಾರಂಪರಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸ್ಥಳವಾಗಲಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಹಾಗೂ ಕರಕುಶಲ ಮಾರಾಟಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಅಭಿವೃದ್ಧಿಪಡಿಸಬೇಕು” ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.‌

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದಲ್ಲಿ ಸ್ವತಂತ್ರ ಮಾಧ್ಯಮದ ಪಾಲಿಗೆ ಇದು ಅತ್ಯಂತ ಕರಾಳ ಕಾಲ

“ಮೈಸೂರಿಗೆ ಆಗಮಿಸುವ ದೇಶ ಹಾಗೂ ವಿದೇಶಗಳ ಪ್ರವಾಸಿಗರನ್ನು ಯೂನಿಟಿ‌ ಮಾಲ್ ಆಕರ್ಷಿಸುವಂತಿರಬೇಕು. ಅತ್ಯುತ್ತಮವಾದ ಆಹಾರ ಮಾರಾಟ ಕೇಂದ್ರ, ಆಟದ ಸ್ಥಳಗಳು, ಮನರಂಜನಾ ಕೇಂದ್ರಗಳು, ಶಿಶುವಿಹಾರ ಒಳಗೊಂಡಿರಬೇಕು” ಎಂದು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಸಿಇಒ ಸೇರಿದಂತೆ ಸಣ್ಣ ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X