ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿದ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಹೆಚ್ ಡಿ ಕುಮಾರಸ್ವಾಮಿ, ಘಟನೆ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.
ಘಟನೆಯ ಕುರಿತು ಭಾನುವಾರ ಟ್ವೀಟ್ ಮಾಡಿರುವ ಅವರು, ‘ಬೆಂಕಿ ಅವಘಡದಲ್ಲಿ 14 ಜನರು ಸಾವಿಗೀಡಾಗಿರುವ ಘಟನೆ ಬಗ್ಗೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ. ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ’ ಎಂದು ತಿಳಿಸಿದ್ದಾರೆ.
ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತ ಸಾವು ಕಂಡಿರುವ ಘಟನೆಯ ಬಗ್ಗೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ.
ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ.…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 8, 2023
ಜೀವ ಕಳೆದುಕೊಂಡ ಎಲ್ಲಾ ನತದೃಷ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದಿದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
#WATCH | Karnataka: Morning visuals from a firecracker store in Attibele where 12 people lost their lives after a fire broke out in the shop yesterday.
Karnataka CM Siddaramaiah is scheduled to visit the accident site today. pic.twitter.com/kzb72oVp2T
— ANI (@ANI) October 8, 2023
ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರ ಆಸರೆಯಾಗಿ ನಿಲ್ಲಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.