ಅತ್ತಿಬೆಲೆ ಪಟಾಕಿ ದುರಂತ ಪ್ರಕರಣದ ತನಿಖೆ ಸಿಐಡಿಗೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

Advertisements

ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ 14 ಕಾರ್ಮಿಕರು ಸಾವನ್ನಪ್ಪಿದ ಪ್ರಕರಣವನ್ನು ಸಿಐಡಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ  ಹೇಳಿದರು.

ಅಗ್ನಿ ದುರಂತ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೇಳೆ, ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ, ಅಗ್ನಿಶಾಮಕ ಡಿಜಿ ಕಮಲ್​​ ಪಂತ್ ಅವರ ಜತೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡದಿಂದ 14 ಜನ ಕಾರ್ಮಿಕರು ಸಾವನ್ನಪ್ಪಿರುವುದು ದುರದೃಷ್ಟಕರ. ಮೃತರ ಕುಟಂಬಸ್ಥರಿಗೆ ಕರ್ನಾಟಕ ಸರ್ಕಾರದ ಕಡೆಯಿಂದ5 ಲಕ್ಷ ಪರಿಹಾರ ನೀಡಲಾಗುವುದು” ಎಂದು ತಿಳಿಸಿದರು.

Advertisements

“ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತ ಶನಿವಾರ ಮಧ್ಯಾಹ್ನ 3.15ರಿಂದ 3.30 ನಡುವೆ ನಡೆದಿದೆ. ಅಗ್ನಿ ದುರಂತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಗೋಡೌನ್ನಲ್ಲಿ ಸುರಕ್ಷತಾ ಕ್ರಮ ಇರಲಿಲ್ಲ ಎಂಬ ಮಾಹಿತಿ ಇದೆ. ವಿದ್ಯುತ್ತಂತಿ ಅಥವಾ ಯುಪಿಎಸ್​​ನಿಂದ ಈ ದುರಂತ ನಡೆದಿರಬಹುದು. ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆಎಂದು ತಿಳಿಸಿದರು.

“ಪಟಾಕಿ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದವರು ಎಲ್ಲರೂ ವಿದ್ಯಾರ್ಥಿಗಳು. ರಜೆ ಇರುವ ಕಾರಣ ದುಡಿಮೆಗಾಗಿ ಪಟಾಕಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು” ಎಂದರು.

ಈ ಸುದ್ದಿ ಓದಿದ್ದೀರಾ? ಅತ್ತಿಬೆಲೆ ಪಟಾಕಿ ದುರಂತ | ಮೃತರ ಕುಟುಂಬಸ್ಥರಿಗೆ ₹3 ಲಕ್ಷ ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ

“ಗೋದಾಮಿನಲ್ಲಿ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿರಲಿಲ್ಲ ಎಂದು ತಿಳಿದುಬಂದಿದೆ. ಪಟಾಕಿ ಮಾರಾಟಕ್ಕೆ ಮತ್ತು ಸಂಗ್ರಹಣೆಗೆ ಲೈಸೆನ್ಸ್‌ ಇದೆಯಾ ಎಂಬ ಬಗ್ಗೆ ಪರಿಶೀಲನೆ ಮಾಡಬೇಕು. ಈ ದುರಂತಕ್ಕೆ ಸಂಬಂಧಿಸಿದಂತೆ ಪಟಾಕಿ ಕಂಪನಿ ಮಾಲೀಕ ರಾಮಸ್ವಾಮಿ ರೆಡ್ಡಿ, ಪುತ್ರ ನವೀನ್ ಹಾಗೂ ಕಟ್ಟಡದ ಮಾಲೀಕ ಅನಿಲ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

ಪರಿಶೀಲನೆ ವೇಳೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್​, ಸಚಿವರಾದ ರಾಮಲಿಂಗಾರೆಡ್ಡಿ, ಭೈರತಿ ಸುರೇಶ್ ಹಾಗೂ ಶಾಸಕ ಎಸ್​.ಟಿ.ಸೋಮಶೇಖರ್ಸೇರಿದಂತೆ ಹಲವರು ಇದ್ದರು. ​​

ಐವರ ವಿರುದ್ಧ ಎಫ್‌ಐಆರ್‌ ದಾಖಲು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತರ ಸಂಬಂಧಿ ಲೋಕೇಶ್ವರನ್ ಎಂಬುವವರು ಕೊಟ್ಟ ದೂರಿನ ಮೇರೆಗೆ ಐಪಿಸಿ 427, 285, 286, 304, 337, 338 ಎಕ್ಸ್ ಪ್ಲೋಸಿವ್ ಆಕ್ಟ್ ಅಡಿ ಒಟ್ಟು ಐವರ ವಿರುದ್ಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ಗೋಡೌನ್​ ಮಾಲೀಕ ರಾಮಸ್ವಾಮಿ ರೆಡ್ಡಿ, ನವೀನ್ ರೆಡ್ಡಿ (ರಾಮಸ್ವಾಮಿ ರೆಡ್ಡಿ ಪುತ್ರ), ಮ್ಯಾನೇಜರ್ ಲೋಕೇಶ್, ಕಟ್ಟಡ ಮಾಲೀಕರು ಜಯಮ್ಮ ಹಾಗೂ ಅನಿಲ್ ರೆಡ್ಡಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X