ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೆ ಎರಡು ಎಫ್ಐಆರ್

Date:

Advertisements

ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್‌ ಕೆರೆಹಳ್ಳಿ ವಿರುದ್ಧ ಬೆಂಗಳೂರು ಪೊಲೀಸರು ಹೊಸದಾಗಿ ಮತ್ತೆ ಎರಡು ಪ್ರಕರಣ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ಯತ್ನ ಆರೋಪದಡಿ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಮತ್ತು ಕಾನೂನು ವ್ಯವಸ್ಥೆಗೆ ಧಕ್ಕೆ ತಂದ ಆರೋಪದಡಿ ವಿ ವಿ ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಮ್ಮ ವಿರುದ್ಧ ರೌಡಿಪಟ್ಟಿ ತೆರೆದಿರುವುದಕ್ಕೆ ರಾಜ್ಯ ಸರಕಾರ ಸ್ಪಷ್ಟೀಕರಣ ನೀಡಬೇಕೆಂದು ಆಗ್ರಹಿಸಿ ಪುನೀತ್‌ ಕೆರೆಹಳ್ಳಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಈ ನಡುವೆ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣಕ್ಕೆ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು.

ಆಸ್ಪತ್ರೆಯಲ್ಲಿರುವ ಪುನೀತ್‌ ಕೆರೆಹಳ್ಳಿ, ‘ಸರಕಾರ ಸ್ಪಷ್ಟನೆ ನೀಡುವವರೆಗೂ ಆಹಾರ ಹಾಗೂ ನೀರು ಸೇವಿಸುವುದಿಲ್ಲ. ಬೇಕಿದ್ದರೆ ಪ್ರಾಣ ಹೋಗಲಿ. ಚಿಕಿತ್ಸೆ ಸಹ ಪಡೆದುಕೊಳ್ಳುವುದಿಲ್ಲ’ ಎಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ, ಅವರ ವಿರುದ್ಧ ಆತ್ಮಹತ್ಯೆ ಯತ್ನ ಆರೋಪದಡಿ ದೂರು ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಅಕ್ಟೋಬರ್‌ 7ರಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದ ಹಿಂದೂ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರ ಎದುರು ಪುನೀತ್‌ ಕೆರೆಹಳ್ಳಿ, ಸರಕಾರಿ ಬಸ್‌ಗೆ ಬೆಂಕಿ ಹಚ್ಚುತ್ತೇನೆ ಹಾಗೂ ವಿಧಾನಸೌಧಕ್ಕೆ ಕಲ್ಲು ಹೊಡೆಯುತ್ತೇನೆ ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದರು. ಈ ಸಂಬಂಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿಯು ದೂರು ಕೊಟ್ಟಿತ್ತು. ಈ ದೂರು ಆಧರಿಸಿ ಪುನೀತ್‌ ವಿರುದ್ಧ ಕಾನೂನು ವ್ಯವಸ್ಥೆಗೆ ಧಕ್ಕೆ ತಂದ ಆರೋಪದಡಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X