ಉಡುಪಿ | ಮಾಧ್ಯಮಗಳು ಸುಳ್ಳು ಸುದ್ದಿಗೆ ಕಡಿವಾಣ ಹಾಕಿ ಸತ್ಯ ಸುದ್ದಿ ಬಿತ್ತರಿಸಬೇಕು: ಸ್ವರ್ಣ ಭಟ್

Date:

Advertisements

ವಾಟ್ಸಾಪ್‌, ಫೇಸ್‌ಬುಕ್ ನಂತಹ ಸಾಮಾಜಿಕ ತಾಣಗಳಲ್ಲಿ ಸತ್ಯಕ್ಕಿಂತ ಸುಳ್ಳು ಸುದ್ದಿಗಳೇ ಹೆಚ್ಚಾಗಿ ಹರಿದಾಡುತ್ತವೆ. ಇಂತಹ ಸುಳ್ಳು ಸುದ್ದಿಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದೆ. ಮಾಧ್ಯಮಗಳು ಇಂತಹ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಿ ಸತ್ಯ ಸುದ್ದಿಗಳನ್ನು ಬಿತ್ತರಿಸಬೇಕು ಎಂದು ಗ್ರಾಮೀಣ ಕೂಲಿಕಾರರ ಸಂಘದ ರಾಜ್ಯ ಸಂಚಾಲಕಿ ಸ್ವರ್ಣ ಭಟ್ ಹೇಳಿದ್ದಾರೆ.

ಉಡುಪಿಯಲ್ಲಿ ಮಾಸ್‌ ಮೀಡಿಯಾ ಫೌಂಡೇಷನ್‌ ಆಯೋಜಿಸಿದ್ದ ನಾಗರಿಕ ಪತ್ರಕರ್ತರ ಸಮಾಗಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. “ಸಾಮಾಜಿಕ ಜಾಲತಾಣದಲ್ಲಿ ನಮಗೆ ಸಿಗುವ ಸುದ್ದಿಗಳನ್ನು ಪರಾಮರ್ಶೆ ನಡೆಸದೆ ಹಂಚಿಕೊಳ್ಳುತ್ತೇವೆ. ಇದರಿಂದಾಗಿ ಪರಸ್ಪರ ಸಂಬಂಧಗಳೇ ಹಾಳಾಗುತ್ತಿರುವುದನ್ನು ಕಾಣುತ್ತಿದ್ದೇವೆ. ನಮ್ಮ ಮೊಬೈಲ್ ಗೆ ಬಂದ ಸುದ್ದಿಗಳೇ ನಾವು ಸತ್ಯ ಎಂದು ನಂಬುವಷ್ಟರ ಮಟ್ಟಿಗೆ ನಾವು ಸುಳ್ಳು ಸುದ್ದಿಗಳಿಗೆ ಅವಲಂಭಿತರಾಗಿದ್ದೇವೆ. ಮಾಧ್ಯಮಗಳು ಸುಳ್ಳುಗಳನ್ನು ಬಿತ್ತರಿಸದೇ ಸತ್ಯ ಸುದ್ದಿಗಳನ್ನು ಬಿತ್ತರಿಸುವ ಮೂಲಕ ಸಮಾಜದ ಕನ್ನಡಿಯಾಗಿ ಕಾರ್ಯನಿರ್ವಹಿಸಬೇಕು” ಎಂದು ಹೇಳಿದರು.

ಸಹಬಾಳ್ವೆ ಉಡುಪಿಯ ನಾಗೇಶ್ ಉದ್ಯಾವರ್ ಮಾತನಾಡಿ, “ಈದಿನ.ಕಾಮ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿಖರವಾದ ಸಮೀಕ್ಷೆ ನಡೆಸಿ ಜನಮನ್ನಣೆ ಪಡೆದಿದೆ. ಯಾರೂ ಕೂಡ ಊಹಿಸದಂತಹ ಸಮೀಕ್ಷೆ ನಡೆಸಿತ್ತು. ಇಷ್ಟು ನಿಖರವಾದ ಸಮೀಕ್ಷೆಯನ್ನು ದೊಡ್ಡ ಮಾಧ್ಯಮಗಳು ಕೂಡ ನೀಡಿರಲಿಲ್ಲ. ಈದಿನ.ಕಾಮ್ ಜನಸಾಮಾನ್ಯರ ಧ್ವನಿಯಗಿ ಮುಂದುವರೆಯಲಿ” ಎಂದು ಆಶಯ ವ್ಯಕ್ತಪಡಿಸಿದರು.

Advertisements

ಕಾರ್ಯಕ್ರಮದಲ್ಲಿ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಡಾ. ವಿನ್ಸೆಂಟ್ ಆಳ್ವಾ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸುಂದರ್ ಮಾಸ್ಟರ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಸದಸ್ಯ ಪೀರ್ ಸಾಹೇಬ್ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಸ್ ಮೀಡಿಯಾ ಫೌಂಡೇಶನ್ ವ್ಯವಸ್ಥಾಪಕ ಉಮರ್ ಯು.ಹೆಚ್ ವಹಿಸಿದ್ದರು. ಈದಿನ.ಕಾಮ್ ಕರಾವಳಿ ವಲಯ ವರದಿಗಾರ ಶಾರೂಕ್ ತೀರ್ಥಹಳ್ಳಿ ಕಾರ್ಯಕ್ರಮ ನಿರೂಪಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X