ರಾಯಚೂರು | ಖಾಯಂ ಶಿಕ್ಷಕರ ನೇಮಕಾತಿಗೆ ಎಸ್ಎಫ್ಐ ಒತ್ತಾಯ

Date:

Advertisements

ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಖಾಯಂ ಶಿಕ್ಷಕರನ್ನು ನೇಮಿಸಬೇಕು. ಆ ಮೂಲಕ ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಬೇಕು ಎಂದು ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಎಸ್ಎಫ್ಐ ಮುಖಂಡರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಘಟನೆಯ ಮುಖಂಡರು, “2022-23 ಸಾಲಿನಲ್ಲಿ ಶಿಕ್ಷಕರ ವರ್ಗಾವಣೆಯಿಂದ ರಾಯಚೂರು ಜಿಲ್ಲೆಯ ಶಾಲೆಗಳಲ್ಲಿ ಶಿಕ್ಷಕರಿಲ್ಲದಂತಾಗಿದೆ. 52,000 ಮಕ್ಕಳಿರುವ ದೇವದುರ್ಗ ತಾಲೂಕಿನಲ್ಲಿ 373 ಶಿಕ್ಷಕರು, ಮಾನ್ವಿ ತಾಲೂಕಿನಲ್ಲಿ 351, ಸಿಂಧನೂರಿನಿಂದ 401, ಲಿಂಗಸೂಗೂರಿನಿಂದ 380, ರಾಯಚೂರು ತಾಲೂಕಿನಿಂದ 280 ಶಿಕ್ಷಕರು ವರ್ಗಾವಣೆಯಾಗಿದ್ದಾರೆ. ಪರಿಣಾಮ ಜಿಲ್ಲೆಯ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಹಿಂದುಳಿಯುವ ಆತಂಕ ಎದರುಆಗಿದೆ” ಎಂದು ವಿವರಿಸಿದ್ದಾರೆ.

“ಖಾಲಿ ಇರುವ ಹುದ್ದೆಗಳಿಗೆ ಖಾಯಂ ಶಿಕ್ಷಕರ ನೇಮಕಾತಿ ಮಾಡುವವರೆಗೂ ವರ್ಗಾವಣೆಗೊಂಡ ಶಿಕ್ಷಕರನ್ನು ಶಾಲೆಗಳಿಂದ ಬಿಡುಗಡೆ ಮಾಡದಂತೆ ಜಿಲ್ಲೆಯಾದ್ಯಂತ ಹೋರಾಟಗಳನ್ನು ಮಾಡಲಾಗಿತ್ತು. ನಂತರ ದಿನಾಂಕ 25/08/2023 ರಂದು ಮುಖ್ಯಮಂತ್ರಿ, ಶಿಕ್ಷಣ ಸಚಿವರು, ಉಸ್ತುವಾರಿ ಸಚಿವರು, ಶಿಕ್ಷಣ ಇಲಾಖೆಯ ಆಯುಕ್ತರು ಎಲ್ಲರಿಗೂ ಪತ್ರ ಸಲ್ಲಿಸಿ ಒತ್ತಾಯಿಸಲಾಗಿತ್ತು. ಆಗ ಜಿಲ್ಲಾ ಉಸ್ತುವಾರಿ ಸಚಿವರು ಸಮಸ್ಯೆಯನ್ನು ಮನಗಂಡು ದಿನಾಂಕ 17/09/2023 ರಂದು ಬಿಡುಗಡೆಗೆ ತಾತ್ಕಾಲಿಕ ತಡೆ ನೀಡಲು ಉಪ ನಿರ್ದೇಶಕರಿಗೆ ಸೂಚಿಸಿದ್ದರು. ಜಿಲ್ಲಾಧಿಕಾರಿ ಕೂಡಾ ತಡೆಗೆ ಆದೇಶಿಸಿ ಸೂಚಿಸಿದ್ದರು. ಪರಿಣಾಮ ಬಿಡುಗಡೆಗೆ ತಾತ್ಕಾಲಿಕ ತಡೆ ಬಿದ್ದಿತ್ತು. ಆದರೆ, ಇದೀಗ ಅತಿಥಿ ಶಿಕ್ಷಕರ ನೇಮಕ ಮಾಡಿದ್ದೇವೆಂದು ಸರ್ಕಾರ ಹೇಳುತ್ತಿದೆ.ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಜಿಲ್ಲೆಯ ಮಕ್ಕಳ ಹಿತ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಜಿಲ್ಲೆಯ ಗಂಭೀರವಾದ ಶೈಕ್ಷಣಿಕ ಸಮಸ್ಯೆಯನ್ನು ಸರ್ಕಾರ ಮರೆಮಾಚುತ್ತಿದೆ” ಎಂದು ಎಸ್‌ಎಫ್‌ಐ ಆರೋಪಿಸಿದೆ.

Advertisements

“ಶಿಕ್ಷಕರ ವರ್ಗಾವಣೆಯಿಂದ ಪ್ರತಿ ತಾಲೂಕಿನಲ್ಲಿ 85-100 ಶಾಲೆಗಳು ಶೂನ್ಯ ಶಿಕ್ಷಕ ಶಾಲೆಗಳಾಗಿವೆ. ಜಿಲ್ಲೆಯಲ್ಲಿ ಅನೇಕ ಶಾಲೆಗಳು ಮುಚ್ಚುತ್ತಿವೆ. ಸಿರವಾರ ತಾಲೂಕಿನ ಜಕ್ಕಲ ದಿನ್ನಿ ಕ್ಯಾಂಪ್, ಕಡದಿನ್ನಿ ಕ್ಯಾಂಪ್, ಅತ್ತನೂರು ಅಂಜನೇಯ ಕ್ಯಾಂಪ್, ಬಾಗಲವಾಡದ ಲಕ್ಷ್ಮೀ ಕ್ಯಾಂಪ್, ಚಾಗಬಾವಿ ಕ್ಯಾಂಪ್ ಹಾಗೂ ಮಸ್ಕಿಯ ಬೊಂಬಾಯಿ ದೊಡ್ಡಿ, ಲಿಂಗಸಗೂರಿನ ಮಲ್ಲಾಪೂರು ಕ್ಯಾಂಪ್ ಸೇರಿದಂತೆ ಜಿಲ್ಲೆಯ ಇನ್ನೂ ಅನೇಕ ಶಾಲೆಗಳು ಮುಚ್ಚಿವೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶಿಕ್ಷಕರ ನೇಮಕಾತಿ ಮಾಡಲು ಮುಂದಾಗಬೇಕು. ಈ ಶೈಕ್ಷಣಿಕ ವರ್ಷ ಮುಗಿಯುವವರೆಗೂ ವರ್ಗಾವಣೆಗೊಂಡ ಶಿಕ್ಷಕರನ್ನು ಬಿಡುಗಡೆ ಮಾಡಬಾರದು” ಎಂದು ಒತ್ತಾಯಿಸಿದ್ದಾರೆ.

ನಿಯೋಗದಲ್ಲಿ ಎಸ್ಎಫ್ಐ ರಾಯಚೂರು ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ರಾಜ್ಯ ಪದಾಧಿಕಾರಿ, ಹೈಕೋರ್ಟ್ ವಕೀಲೆ ಗಾಯತ್ರಿ, ಸಾಮಾಜಿಕ ಹೋರಾಟಗಾರ ಶಿವರಾಜ್ ಕೊತ್ತದೊಡ್ಡಿ, ಹೊನ್ನಪ್ಪ ನಾಯಕ, ಮೇಘಾ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X