ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕಗಳು ಪ್ರಕಟವಾದ ನಂತರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, “ಬಿಜೆಪಿಯ ವಿದಾಯವನ್ನೂ ಘೋಷಿಸಲಾಗಿದೆ” ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? Big Breaking: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಮುಂಬರುವ ಚುನಾವಣೆಗಳಲ್ಲಿ ಸಾಮಾಜಿಕ ನ್ಯಾಯ, ಸಾರ್ವಜನಿಕ ಕಲ್ಯಾಣ ಮತ್ತು ಪ್ರಗತಿಪರ ಅಭಿವೃದ್ಧಿಯು ಪಕ್ಷದ ಭರವಸೆ” ಎಂದು ಹೇಳಿದರು.
5 राज्यों के चुनावों की घोषणा के साथ भाजपा और उसके साथियों की विदाई का भी उद्घोष हो गया है।
छत्तीसगढ़, मध्य प्रदेश, राजस्थान, तेलंगाना और मिजोरम में कांग्रेस पार्टी मज़बूती के साथ जनता के पास जाएगी।
जन-कल्याण, सामाजिक न्याय और प्रगतिशील विकास ही कांग्रेस पार्टी की गारन्टी…
— Mallikarjun Kharge (@kharge) October 9, 2023
“ಐದು ರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾಗುವುದರೊಂದಿಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ವಿದಾಯ ಕೂಡ ಘೋಷಿಸಲಾಗಿದೆ. ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಕಾಂಗ್ರೆಸ್ ಆತ್ಮವಿಶ್ವಾಸದೊಂದಿಗೆ ಜನರ ಬಳಿಗೆ ಹೋಗಲಿದೆ. ಸಾರ್ವಜನಿಕ ಕಲ್ಯಾಣ, ಸಾಮಾಜಿಕ ನ್ಯಾಯ ಮತ್ತು ಪ್ರಗತಿಪರ ಅಭಿವೃದ್ಧಿಯು ಕಾಂಗ್ರೆಸ್ ಭರವಸೆಯಾಗಿದೆ, ”ಎಂದು ಮಲ್ಲಿಕಾರ್ಜುನ ಖರ್ಗೆ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.