ಜನರೇ ಸೇರಿ ಬ್ರ್ಯಾಂಡ್‌ ಬೆಂಗಳೂರು ಕಟ್ಟಬೇಕು ಎಂದ ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಜನರ ಧ್ವನಿಯೇ ಸರ್ಕಾರದ ಧ್ವನಿಯಾಗಬೇಕು ಎಂಬ ನಿಟ್ಟಿನಲ್ಲಿ ಬೆಂಗಳೂರಿನ ಅಭಿವೃದ್ಧಿಗಾಗಿ ‘ಬ್ರ್ಯಾಂಡ್‌ ಬೆಂಗಳೂರು’ ಅಭಿಯಾನದಡಿ ಸಾರ್ವಜನಿಕರಿಂದ ಸಲಹೆ ಕೇಳಲಾಗಿತ್ತು. ಪುಟಾಣಿ ಮಕ್ಕಳಿಂದ ಹಿಡಿದು ಹಿರಿಯರವರೆಗೂ 70 ಸಾವಿರಕ್ಕೂ ಹೆಚ್ಚು ಜನರು ತಮ್ಮ ಸಲಹೆ ನೀಡಿದ್ದಾರೆ. ಈ ಎಲ್ಲ ಸಲಹೆಗಳನ್ನು ಕ್ರೋಡೀಕರಿಸಲಾಗುತ್ತಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಸೆಂಟ್ರಲ್‌ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ‘ಬ್ರ್ಯಾಂಡ್‌ ಬೆಂಗಳೂರು ಸಮ್ಮೇಳನ’ವನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ ನನಗೆ ಸಿಕ್ಕಿರುವ ಸ್ಥಾನವನ್ನು ನನ್ನ ಒಂದು ಅಭಿರುಚಿಯಾಗಿ ಆಗಿ ತೆಗೆದುಕೊಂಡಿದ್ದೇನೆ. ಬೆಂಗಳೂರು ಪೂರ್ವ ಯೋಜಿತ ನಗರವಲ್ಲ. ಸದ್ಯ ನಮ್ಮ ಕಣ್ಮುಂದೆ ಕಾಣುತ್ತಿರುವ ಅತಿ ದೊಡ್ಡ ಸಮಸ್ಯೆಗಳೆಂದರೆ ಕಸ ವಿಲೇವಾರಿ ಮತ್ತು ಟ್ರಾಫಿಕ್‌ ಸಮಸ್ಯೆ. ಈಗಾಗಲೇ ಹೈದರಾಬಾದ್‌ಗೆ ಭೇಟಿ ನೀಡಿ ಅಲ್ಲಿನ ಕಸ ವಿಲೇವಾರಿ ವ್ಯವಸ್ಥೆಯನ್ನು ವೀಕ್ಷಿಸಿದ್ದೇನೆ. ಇನ್ನೂ ಒಂದೆರಡು ರಾಜ್ಯಗಳಿಗೆ ಭೇಟಿ ನೀಡುತ್ತೇನೆ’ ಎಂದು ತಿಳಿಸಿದರು.

Advertisements

‘ನಗರದ ಟ್ರಾಫಿಕ್‌ ಜಂಕ್ಷನ್‌ಗಳಿಗೆ ಭೇಟಿ ನೀಡಿ ಸುಗಮ ಸಂಚಾರಕ್ಕಾಗಿ ಏನೇನು ಮಾಡಬಹುದು ಎಂಬ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದ್ದೇನೆ. ಬೆಂಗಳೂರಿನ ಜನತೆಯ ಆಸ್ತಿ ರಕ್ಷಣೆಗಾಗಿ ಒಂದಷ್ಟು ಸುಧಾರಣೆಗಳನ್ನು ತರಲು ಮುಂದಾಗಿದ್ದೇವೆ. ಮನೆ ನಿರ್ಮಾಣದ ಅನುಮತಿ ಪತ್ರವನ್ನು ಮನೆ ಬಾಗಿಲಿಗೇ ತಲುಪಿಸುವ ಹೊಸ ವ್ಯವಸ್ಥೆ ಸದ್ಯದಲ್ಲೇ ಜಾರಿಗೆ ಬರಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.

‘ಜನರೇ ಸೇರಿ ಬ್ರ್ಯಾಂಡ್‌ ಬೆಂಗಳೂರು ಕಟ್ಟಬೇಕು. ಹಾಗಾಗಿ ವಾರ್ಡ್‌ನಲ್ಲಿರುವ ಪಾರ್ಕ್‌, ಕ್ರೀಡಾಂಗಣ, ಸೇರಿದಂತೆ ವಾರ್ಡಿನ ಸರ್ಕಾರಿ ಆಸ್ತಿಯನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಅಲ್ಲಿನ ಸ್ಥಳೀಯ ನಾಗರಿಕರಿಗೆ ವಹಿಸಬೇಕಿದೆ. ರಸ್ತೆ ಗುಂಡಿಗಳ ಬಗ್ಗೆ ಜನರೇ ಮಾಹಿತಿ ನೀಡುವ ವ್ಯವಸ್ಥೆಯನ್ನು ಜಾರಿಗೆ ತಂದಿದ್ದೇವೆ’ ಎಂದು ತಿಳಿಸಿದರು.

ಸಮ್ಮೇಳನದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಬಿಎಂಆರ್‌ಸಿಎಲ್ ನಿಗಮದ ಎಂಡಿ ಅಂಜುಮ್ ಫರ್ವೇಝ್, ಕೆಎಸ್‌ಆರ್‌ಟಿಸಿ ಎಂಡಿ ಜಿ ಸತ್ಯವತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X