ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಏಕೆ? ಕಾರಣ ಬಿಚ್ಚಿಟ್ಟ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

Date:

Advertisements

ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಕಾರಣ ಬಿಚ್ಚಿಟ್ಟಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಮಿತ್ ಶಾ ಜೊತೆ ಕುಮಾರಸ್ವಾಮಿ ಚರ್ಚೆ ಮಾಡಿದ್ದಾರೆ. ಲೋಕಸಭಾ ಕ್ಷೇತ್ರಗಳ ಸೀಟು ಹಂಚಿಕೆ ಬಗ್ಗೆ ಚರ್ಚೆ ಇನ್ನೂ ನಡೆಯಬೇಕಷ್ಟೇ. ದಸರಾ ಬಳಿಕ ಸೀಟು ಹಂಚಿಕೆ ಚರ್ಚೆ ನಡೆಯಲಿದೆ. ಅಮಿತ್ ಶಾ ಜೊತೆ ಕುಮಾರಸ್ವಾಮಿ ಮತ್ತೆ ಚರ್ಚೆ ಮಾಡಲಿದ್ದಾರೆ. ಮೈತ್ರಿ ಚರ್ಚೆಗೂ ಮುನ್ನ ಶಾಸಕರು, ಸಿ ಎಂ ಇಬ್ರಾಹಿಂ ಜೊತೆ ಮಾತುಕತೆ ನಡೆಸುತ್ತೇವೆ. ಆ ನಂತರ ಎಚ್​ ಡಿ ಕುಮಾರಸ್ವಾಮಿ ಅವರು ಅಮಿತ್ ಶಾರನ್ನು ಭೇಟಿ ಮಾಡಲಿದ್ದಾರೆ. ಮಂಡ್ಯ ಸೇರಿದಂತೆ ಯಾವುದೇ ಕ್ಷೇತ್ರಗಳ ಬಗ್ಗೆ ತೀರ್ಮಾನ ಆಗಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಎಲ್ಲ 28 ಕ್ಷೇತ್ರಗಳನ್ನೂ ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಆ ಕಾರಣಕ್ಕೆ ಮೈತ್ರಿ ನಿರ್ಧಾರಕ್ಕೆ ಬಂದಿದ್ದೇವೆ” ಎಂದು ತಿಳಿಸಿದರು.

“ಸಂಸತ್ತಿನ ಚಳಿಗಾಲದ ಅಧಿವೇಶನ ಕಳೆದು ನನ್ನ ಆರೋಗ್ಯ ಸುಧಾರಿಸಿದರೆ ನಾನು ಅಥವಾ ಕುಮಾರಸ್ವಾಮಿ ಮತ್ತೆ ಕೇಂದ್ರ ಗೃಹಮಂತ್ರಿಗಳ ಜೊತೆ ಚರ್ಚೆ ನಡೆಸಲಿದ್ದೇವೆ. ಮೈತ್ರಿಗೆ ಮೊದಲು ಜೆಡಿಎಸ್ ನ 19 ಶಾಸಕರು, 8 ವಿಧಾನ ಪರಿಷತ್ ಸದಸ್ಯರುಗಳು, ಪಕ್ಷದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಜೊತೆ ಎರಡು ಸುತ್ತು ಮಾತುಕತೆ ನಡೆಸಲಾಗಿದೆ. ಅದು ನಡೆದ ಬಳಿಕ ಕುಮಾರಸ್ವಾಮಿ ಗೃಹ ಮಂತ್ರಿಗಳ ಭೇಟಿ ಮಾಡಿದ್ದಾರೆ. ಹಿಂದಿನ ಚುನಾವಣೆಯ ಮತ ಗಳಿಕೆ ಒಟ್ಟುಗೂಡಿಸಿ ಒಂದು ನಿರ್ಧಾರಕ್ಕೆ ಬರಲಾಗಿದೆ. ಆದರೆ ಯಾವ ಯಾವ ಕ್ಷೇತ್ರ ಅನ್ನೋ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ಮಂಡ್ಯ ಸೇರಿದಂತೆ ಯಾವುದೇ ತೀರ್ಮಾನ ಆಗಿಲ್ಲ. ಸದ್ಯ ಹಾಸನ ಜೆಡಿಎಸ್, ರಾಮನಗರ ಕಾಂಗ್ರೆಸ್ ಕೈಯಲ್ಲಿದೆ, ಉಳಿದೆಡೆ ಬಿಜೆಪಿನೇ ಇದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ವಿಧಾನಸಭಾ ಚುನಾವಣೆಗಳ ಜೊತೆ ಬಿಜೆಪಿ ವಿದಾಯವನ್ನು ಘೋಷಿಸಲಾಗಿದೆ: ಮಲ್ಲಿಕಾರ್ಜುನ ಖರ್ಗೆ

“ಜಾತಿ ಆಧಾರದಲ್ಲಿ ಮತ ವಿಭಜನೆಯ ಬಗ್ಗೆ ನಾನು ಈಗ ವಾದ ಮಾಡಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೇಕಡಾವಾರು ಮತ ಬಿಜೆಪಿಗೆ 30-33, ಕಾಂಗ್ರೆಸ್ 40, ಜೆಡಿಎಸ್ 20, 22 ಸಿಕ್ಕಿದೆ. ಈ ಬಾರಿಗೆ ಯಾರಿಗೆ ಮತ ಹಾಕಬೇಕು ಎನ್ನುವುದನ್ನು ಮತದಾರ ತೀರ್ಮಾನ ಮಾಡ್ತಾನೆ. ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರೋ ವಿಚಾರದ ಬಗ್ಗೆ ಹೆಚ್ಚೇನೂ ನಾನು ಚರ್ಚೆ ಮಾಡಲು ಹೋಗಲ್ಲ. ನಾನು ಇರೋದು ಬೆಂಗಳೂರಿನಲ್ಲಿ, ಯಾರನ್ನೂ ಭೇಟಿಯೂ ಆಗಿಲ್ಲ. ಎನ್‌ಡಿಎ, ಯುಪಿಎ ಬಗ್ಗೆ, ಯಾರ ಬಗ್ಗೆಯೂ ಹೆಚ್ಚು ತಲೆಕೊಡಿಸಿಕೊಳ್ಳಲು ಹೋಗಲ್ಲ. ‘ಐ ಆಮ್ 91 ಕ್ಷಮಿಸಿ’ ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದಂಪತಿ ಸಮೇತ ಇಂದು ಸೋಮವಾರ ಭೇಟಿ ನೀಡಿದ್ದು, ನಾಗಪ್ರತಿಷ್ಠೆ, ತುಲಾಭಾರ, ಮಹಾಪೂಜೆ ನೆರವೇರಿಸಿದರು. ಪತ್ನಿ ಚೆನ್ನಮ್ಮ ಜೊತೆಯಾಗಿ ಪೂಜಾ ಕಾರ್ಯಗಳಲ್ಲಿ ಭಾಗಿಯಾದರು. ದಂಪತಿ ಬೆಳಗ್ಗೆ ಆಶ್ಲೇಷ ಪೂಜೆ ನೆರವೇರಿಸಿದರು. ಬಳಿಕ ಸಂಪುಟ ನರಸಿಂಹ ದೇವರ ದರ್ಶನ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X