ಅಫ್ಘಾನಿಸ್ತಾನ ವಿರುದ್ಧದ ಏಕದಿನ ವಿಶ್ವಕಪ್‌ನ ಭಾರತದ ಎರಡನೇ ಪಂದ್ಯಕ್ಕಾಗಿ ಟೀಂ ಇಂಡಿಯಾ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರು ಭಾರತ ಕ್ರಿಕೆಟ್ ತಂಡದೊಂದಿಗೆ ದೆಹಲಿಗೆ ಪ್ರಯಾಣಿಸುವುದಿಲ್ಲ. ಅವರು ಚೆನ್ನೈನಲ್ಲಿ ಉಳಿಯುತ್ತಾರೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.
ಡೆಂಗ್ಯೂ ಕಾರಣದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯವನ್ನು ತಪ್ಪಿಸಿಕೊಂಡ ಆರಂಭಿಕ ಬ್ಯಾಟರ್ ಅಕ್ಟೋಬರ್ 11 ರಂದು ದೆಹಲಿಯಲ್ಲಿ ನಡೆಯಲಿರುವ ಅಫ್ಘಾನಿಸ್ತಾನ ವಿರುದ್ಧದ ಮುಂದಿನ ಪಂದ್ಯವನ್ನು ಕಳೆದುಕೊಳ್ಳಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ಸ್ಟಾರ್ ಆಟಗಾರ ಶುಭಮನ್ ಗಿಲ್‌ಗೆ ಡೆಂಗ್ಯೂ; ಆಸಿಸ್ ವಿರುದ್ಧ ಅಶ್ವಿನ್ ಕಣಕ್ಕೆ!
🚨 Medical Update: Shubman Gill 🚨
More Details 🔽 #TeamIndia | #CWC23 | #MeninBluehttps://t.co/qbzHChSMnm
— BCCI (@BCCI) October 9, 2023
ಅ.09ರ ಆಸ್ರ್ಟೇಲಿಯಾ ಪಂದ್ಯಕ್ಕೂ ಮುನ್ನ ತೀವ್ರ ಜ್ವರದಿಂದ ಬಳಲುತ್ತಿದ್ದ ಶುಭಮನ್ ಅವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಗಿಲ್ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ತಪಾಸಣೆಯ ನಂತರ ಡೆಂಗ್ಯೂ ಇರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತದ ಮೊದಲ ಪಂದ್ಯದಲ್ಲಿ ಶುಭಮನ್ ಮೈದಾನಕ್ಕೆ ಇಳಿಯದೆ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ.