ಕರಡಿ ದಾಳಿಗೆ ರೈತರೊಬ್ಬರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಘೋಶೆ ಬುದ್ರುಕ ಗ್ರಾಮದಲ್ಲಿ ನಡೆದಿದೆ.
ರೈತ ಭೀಕಾಜಿ ಮಿರಾಶಿ(63) ಎಂಬುವರು ಕರಡಿ ದಾಳಿಗೆ ಬಲಿಯಾದವರು. ಇವರು ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿ ದಾಳಿ ಮಾಡಿದೆ. ದಾಳಿ ಮಾಡಿದ ಜಾಗದಿಂದ ಸುಮಾರು 2 ಕಿಮೀ ದೂರದಲ್ಲಿ ಶವವನ್ನು ಬಿಟ್ಟು ಹೋಗಿದೆ.
ಹೊಲದಲ್ಲಿ ಅವರ ಜತೆಗೆ ಬೇರೆಯವರೂ ಕೆಲಸ ಮಾಡುತ್ತಿದ್ದರು. ಆದರೆ, ಯಾವುದಕ್ಕೂ ಲೆಕ್ಕಿಸದ ಕರಡಿ ದಾಳಿ ಮಾಡಿ ಮಿರಾಶಿ ಅವರನ್ನು ಎತ್ತಿಕೊಂಡು ಹೋಗಿ ಕಾಡಿನಲ್ಲಿ ಎಸೆದು ಹೋಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೂರು ದಿನ ಭಾರೀ ಮಳೆ; ಕೆಲವೆಡೆ ಯೆಲ್ಲೋ ಅಲರ್ಟ್ ಘೋಷಣೆ
ಘಟನೆಗೆ ಸಂಬಂಧಿಸಿದಂತೆ ಖಾನಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಾಣ ಕಳೆದುಕೊಂಡಿರುವ ರೈತನ ಕುಟುಂಬಕ್ಕೆ ನ್ಯಾಯ ಮತ್ತು ಪರಿಹಾರ ಒದಗಿಸಬೇಕು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.