ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು: ಅರಿವು ಸಾಲ ಯೋಜನೆಗೆ ಹೆಚ್ಚುವರಿ ಅನುದಾನ ಒದಗಿಸಲು ಮುಖ್ಯಮಂತ್ರಿ ಸೂಚನೆ

Date:

Advertisements
  • ಅಲ್ಪಸಂಖ್ಯಾತರ ಕಾಲನಿಗಳ ಅಭಿವೃದ್ಧಿಗೆ ಒಂದು ಕೋಟಿ: ಕ್ರಿಯಾ ಯೋಜನೆ ರೂಪಿಸಲು ಸಲಹೆ
  • ವಸತಿ ಇಲಾಖೆ: ಸ್ವಂತ ಸಂಪನ್ಮೂಲ ಕ್ರೋಡೀಕರಣಕ್ಕೆ ನೀತಿ- ಪ್ರಸ್ತಾವನೆಗೆ ಮುಖ್ಯಮಂತ್ರಿ ಸೂಚನೆ

ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿರುವ ಮುಖ್ಯಮಂತ್ರಿಗಳು, ಅರಿವು ಸಾಲ ಯೋಜನೆಯಡಿ ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸಂಖ್ಯೆ ಹೆಚ್ಚಳ ಹಾಗೂ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ ಹೆಚ್ಚಳ ಮಾಡಿರುವುದಕ್ಕೆ ಅನುಗುಣವಾಗಿ ಹೆಚ್ಚುವರಿ ಹುದ್ದೆಗಳ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

Advertisements

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ನಿಗದಿತ ಗುರಿಗೆ ಎದುರಾಗಿ ನಿರೀಕ್ಷೆಗೂ ಮೀರಿ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅರ್ಹ ಫಲಾನುಭವಿಗಳ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿ, ಅನುದಾನ ಲಭ್ಯತೆಗೆ ಅನುಸಾರವಾಗಿ ಸೌಲಭ್ಯ ವಿತರಿಸುವಂತೆ ಸೂಚಿಸಿದರು.

ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಾಲನಿಗಳ ಅಭಿವೃದ್ಧಿಗೆ 1,000 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆ ರೂಪಿಸಿ, ಕಾಮಗಾರಿಗಳ ಆದ್ಯತಾ ಪಟ್ಟಿಯನ್ವಯ ಕೆಲಸ ಕೈಗೆತ್ತಿಕೊಳ್ಳುವಂತೆ ಸಲಹೆ ನೀಡಿದರು.

ಅಲ್ಪಸಂಖ್ಯಾತರ ಇಲಾಖೆಯಡಿ ಆಯವ್ಯಯದಲ್ಲಿ ಘೋಷಿಸಲಾದ 19 ಘೋಷಣೆಗಳ ಪೈಕಿ 16 ಘೋಷಣೆಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸ್ವಂತ ಸಂಪನ್ಮೂಲ ಕ್ರೋಡೀಕರಣ ನೀತಿ ರೂಪಿಸಲು ಮುಖ್ಯಮಂತ್ರಿ ಸೂಚನೆ

ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಪ್ರಗತಿ ಕುಂಠಿತವಾಗಿರುವುದರಿಂದ ಸಂಪನ್ಮೂಲ ಕ್ರೋಡೀಕರಣ ಕುರಿತಂತೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು. ಈ ಯೋಜನೆಯಡಿ ಫಲಾನುಭವಿ ವಂತಿಗೆ ಪ್ರಮಾಣ ಹೆಚ್ಚಾಗಿರುವುದರಿಂದ ಹಾಗೂ ಫಲಾನುಭವಿಗಳ ವಂತಿಗೆ ಪಾವತಿ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೋಡೀಕರಣಕ್ಕೆ ನೀತಿ ರೂಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಒಂದು ಲಕ್ಷ ವಸತಿ ಯೋಜನೆಯಡಿ ನಿರ್ಮಾಣಗೊಂಡ ಮನೆಗಳಿಗೆ ಅಗತ್ಯ ಮೂಲಸೌಕರ್ಯವನ್ನು ಆದ್ಯತೆಯ ಮೇರೆಗೆ ಕಲ್ಪಿಸುವಂತೆ ಸೂಚಿಸಿದರು.

ಸಭೆಯಲ್ಲಿ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹ್ಮದ್‌ ಖಾನ್‌, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್‌ ಅಹ್ಮದ್‌, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X