ಬೆಂಗಳೂರು | ನಗರದ ಹಲವು ಕಸ ವಿಲೇವಾರಿ ಘಟಕಗಳ ಸ್ಥಳಾಂತರ: ಡಿಸಿಎಂ ಡಿ.ಕೆ ಶಿವಕುಮಾರ್

Date:

Advertisements

ಜನ ಸಾಮಾನ್ಯರ ತೊಂದರೆ ನಿವಾರಣೆಗೆ ಯಶವಂತಪುರ ವಿಧಾನಸಭೆ ಕ್ಷೇತ್ರ 5, ಬ್ಯಾಟರಾಯನಪುರದ 2, ದಾಸರಹಳ್ಳಿ, ಆನೇಕಲ್, ಮಹದೇವಪುರ ಕ್ಷೇತ್ರದಲ್ಲಿನ ಕಸ ವಿಲೇವಾರಿ ಘಟಕಗಳನ್ನು ಬೆಂಗಳೂರಿನ ಹೊರಭಾಗದಲ್ಲಿ ಜನರಹಿತ ಬೆಟ್ಟ ಗುಡ್ಡ ಪ್ರದೇಶಕ್ಕೆ ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಜಲಸಂಪನ್ಮೂಲ, ಅರಣ್ಯ ಇಲಾಖೆ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಸಮನ್ವಯ ಸಭೆ ನಡೆಯಿತು. ಸಭೆಯ ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. “ಕಂದಾಯ ಹಾಗೂ ಅರಣ್ಯ ಇಲಾಖೆಗಳ ಜತೆ ಚರ್ಚಿಸಿ, ಪರ್ಯಾಯ ಜಾಗಗಳನ್ನು ಗುರುತಿಸಲಾಗುತ್ತಿದೆ” ಎಂದರು.

“ಬೆಂಗಳೂರು ಅಪಾರವಾಗಿ ಬೆಳದ ಪರಿಣಾಮ ಕಸವಿಲೇವಾರಿ ಘಟಕಗಳು ನಗರದ ಹೃದಯ ಭಾಗಕ್ಕೆ ಬಂದಿವೆ. ಈ ಘಟಕಗಳ ಸುತ್ತಮುತ್ತ ನಾಲ್ಕೈದು ಕಿ.ಮೀ. ವರೆಗೆ ನಾಗರಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಬ್ಯಾಟರಾಯಣಪುರ ಶಾಸಕ, ಸಚಿವ ಕೃಷ್ಣಬೈರೇಗೌಡ, ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತಿತರರು ಕಸ ವಿಲೇವಾರಿ ಘಟಕ ಸ್ಥಳಾಂತರದ ವಿಚಾರವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ನಾನು ಕೂಡ ಖುದ್ದು ಸ್ಥಳ ಪರಿಶೀಲನೆ ನಡೆಸಿದ್ದೆ. ಮುಂದಿನ ದಿನಗಳಲ್ಲಿ ಜನರಿಗೆ ಕಸದ ವಾಸನೆ ಬರಬಾರದು ಎಂಬ ಉದ್ದೇಶದಿಂದ ನಗರದ ಹೊರವಲಯಕ್ಕೆ ಈ ಘಟಕಗಳ ಸ್ಥಳಾಂತರಕ್ಕೆ ನಿರ್ಧರಿಸಿದ್ದೇವೆ” ಎಂದು ತಿಳಿಸಿದರು.

Advertisements

“ಇದಕ್ಕಾಗಿ ನಗರದ ನಾಲ್ಕು ಮೂಲೆಗಳಲ್ಲಿ ಅರಣ್ಯ ಪ್ರದೇಶದ ಗಡಿ ಭಾಗಗಳಲ್ಲಿ 100 ಎಕರೆ ಜಾಗ ನೀಡಿ ಎಂದು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಮನವಿ ಮಾಡಿದ್ದು, ಸರ್ವೇ ಮಾಡಿದ ಬಳಿಕ ಜಾಗ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ನಾವು ಅರಣ್ಯ ಇಲಾಖೆಗೆ ಪರ್ಯಾಯ ಜಾಗ ನೀಡುತ್ತೇವೆ ಅಥವಾ ಖರೀದಿ ಮಾಡುತ್ತೇವೆ” ಎಂದು ತಿಳಿಸಿದರು.

ತಿಪ್ಪಗೊಂಡನಹಳ್ಳಿ ಬಫರ್ ಜೋನ್ ಪುನರ್ ನಿಗದಿ

“ತಿಪ್ಪಗೊಂಡನಹಳ್ಳಿ ನೀರು ಸ್ವಚ್ಛತೆ ಕಾಪಾಡಲು ನಾವು ಆ ಭಾಗದ ಶಾಸಕರ ಜೊತೆ ಚರ್ಚೆ ಮಾಡಿದ್ದೇವೆ. ಮುಂದಿನ ಒಂದೂವರೆ ವರ್ಷಗಳಲ್ಲಿ ನೀರನ್ನು ತರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಈ ನೀರಿಗೆ ಯಾವುದೇ ಕೊಳಚೆ ನೀರು ಸೇರದಂತೆ ನೋಡಿಕೊಳ್ಳಬೇಕು. ಇಲ್ಲಿನ ಬಫರ್ ಜೋನ್ ಅಂತರ ಕಡಿಮೆ ವಿಚಾರವಾಗಿ 2017ರಲ್ಲಿ ಹಾಗೂ 2021ರಲ್ಲಿ ಸರ್ಕಾರ ಆದೇಶವಾಗಿದ್ದರೂ ನಗರಾಭಿವೃದ್ಧಿ ಇಲಾಖೆ ಮೂಲಕ ಜಾರಿ ಆಗದೆ ಯಾರಿಗೂ ಪ್ಲಾನ್ ಸ್ಯಾಂಕ್ಷನ್ ಮಾಡುತ್ತಿಲ್ಲ. ಇದರಿಂದಾಗಿ ಕಾನೂನು ಬಾಹಿರವಾಗಿ ಮನೆ, ಕಟ್ಟಡಗಳ ನಿರ್ಮಾಣವಾಗಿದೆ. ಈ ಭಾಗದಲ್ಲಿ ಕಟ್ಟುನಿಟ್ಟಾಗಿ ಕಾನೂನು ಜಾರಿ ಮೂಲಕ ನಿರ್ಮಾಣಕ್ಕೆ ಅವಕಾಶ ನೀಡಲಾಗುವುದು” ಎಂದು ತಿಳಿಸಿದರು.

“ನೆಲಮಂಗಲ, ಡಾಬಸ್ ಪೇಟೆ, ಶಿವಗಂಗೆ ಸೇರಿದಂತೆ ಅನೇಕ ಕಡೆಗಳಲ್ಲಿ ಪ್ಲಾನ್‌ಗಳಿಗೆ ಅನುಮತಿ ನೀಡುತ್ತಿಲ್ಲ ಎಂದು ಜನ ಗಲಾಟೆ ಮಾಡುತ್ತಿದ್ದಾರೆ. ಕಳೆದ ಸರ್ಕಾರ ತಂದಿರುವ ಕಾನೂನನ್ನೇ ಜಾರಿ ಮಾಡಬೇಕು ಎಂದು ಸಚಿವರಿಗೆ ಮನವಿ ಮಾಡಿದ್ದು, ನಗರಾಭಿವೃದ್ಧಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಕಾನೂನು ತಂಡ ಒಟ್ಟಾಗಿ ಕೂತು ಚರ್ಚೆ ಮಾಡಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಕಾವೇರಿ ವಿಚಾರ । ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ

“ತಿಪ್ಪಗೊಂಡನಹಳ್ಳಿಯಲ್ಲಿ 300 ಎಕರೆ ಹಾಗೂ ಹೆಸರಘಟ್ಟದಲ್ಲಿ 100 ಎಕರೆ ಜಮೀನು ಇದ್ದು, ಇಲ್ಲಿ ಬಿಡಬ್ಲ್ಯೂಎಸ್ಎಸ್ ಬಿಗೆ ಸ್ವಂತ ಸೌರ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣಕ್ಕೆ ಚಿಂತನೆ ನಡೆಸಿದ್ದೇವೆ. ಇವರು ಈಗ ಯುನಿಟ್‌ಗೆ 6 ರೂ.ನಂತೆ ಸಾವಿರ ಕೋಟಿಯಷ್ಟು ಬಿಲ್ ಕಟ್ಟುತ್ತಿದ್ದಾರೆ. ಸೌರ ವಿದ್ಯುತ್ ಘಟಕದಿಂದ ಯುನಿಟ್‌ಗೆ 4 ರೂ.ನಂತೆ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಬಹುದು. ಇದರಿಂದ ನಮ್ಮ ಜಮೀನನ್ನು ಒತ್ತುವರಿಯಿಂದ ಕಾಪಾಡಿಕೊಳ್ಳಬಹುದು, ಸೌರ ವಿದ್ಯುತ್ ಕೂಡ ಉತ್ಪಾದಿಸಬಹುದು. ಈ ವಿಷಯವನ್ನು ಮಾಲಿನ್ಯ ನಿಯಂತ್ರಣ ಮಂಡಳಿಗೆ ತಿಳಿಸಿದ್ದು, ಪರಿಶೀಲನೆ ಮಾಡಲಿದೆ” ಎಂದು ತಿಳಿಸಿದರು.

ತಮಿಳುನಾಡು ವಿಧಾನಸಭೆಯಲ್ಲಿ ಕಾವೇರಿ ವಿಚಾರವಾಗಿ ನಿರ್ಣಯ ಕೈಗೊಂಡಿರುವ ಬಗ್ಗೆ ಮಾತನಾಡಿದ ಅವರು, “ಅವರ ಸರ್ಕಾರ ಅವರಿಗೆ ಬೇಕಾದಂತೆ ಮಾಡಿಕೊಂಡಿದೆ. ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನಮ್ಮ ಸರ್ಕಾರ ನಮ್ಮ ರೈತರನ್ನು ರಕ್ಷಣೆ ಮಾಡಿಕೊಂಡು ಬಂದಿದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X