ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ | ಪ್ಯಾಲೆಸ್ತೀನ್ ರಾಷ್ಟ್ರದ ಸ್ಥಾಪನೆಯೇ ಪರಿಹಾರ: ರಷ್ಯಾ ಅಧ್ಯಕ್ಷ ಪುಟಿನ್

Date:

Advertisements
  • ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಧಾರ ಕಾರ್ಯಗತಗೊಳಿಸಬೇಕಾಗಿದೆ: ರಷ್ಯಾ ಅಧ್ಯಕ್ಷ
  • ಮಧ್ಯಪ್ರಾಚ್ಯದಲ್ಲಿ ಅಮೆರಿಕದ ನೀತಿ ಯಾವ ರೀತಿಯಲ್ಲಿ ವೈಫಲ್ಯ ಎಂಬುವುದಕ್ಕೆ ಸ್ಪಷ್ಟ ಉದಾಹರಣೆ

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ ನಿಲ್ಲಬೇಕೆಂದರೆ ಪ್ಯಾಲೆಸ್ತೀನ್ ರಾಷ್ಟ್ರದ ಸ್ಥಾಪನೆಯೇ ಪರಿಹಾರ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿಕೆ ನೀಡಿದ್ದಾರೆ.

ಇಂದು ರಷ್ಯಾಕ್ಕೆ ಭೇಟಿ ನೀಡಿದ್ದ ಇರಾಕ್ ಪ್ರಧಾನ ಮಂತ್ರಿ ಮೊಹಮ್ಮದ್ ಶಿಯಾ ಅಲ್-ಸುಡಾನಿ ಅವರೊಂದಿಗೆ ಮಾತುಕತೆ ನಡೆಸುವ ವೇಳೆ ಈ ಹೇಳಿಕೆ ನೀಡಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದ ಬಗ್ಗೆ ತಮ್ಮ ಮೊದಲ ಸಾರ್ವಜನಿಕ ಹೇಳಿಕೆ ನೀಡಿರುವ ಪುಟಿನ್, ಅಮೆರಿಕವು ಪ್ಯಾಲೆಸ್ತೀನ್‌ ಜನರ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕಾರ್ಯ ನಿರ್ವಹಿಸುತ್ತಿರುವ ಇಸ್ರೇಲ್ ಪರವಾಗಿ ತನ್ನ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು.

Advertisements

“ಇಸ್ರೇಲ್-ಪ್ಯಾಲೆಸ್ತೀನ್ ನಡುವಿನ ಸಂಘರ್ಷವು ಮಧ್ಯಪ್ರಾಚ್ಯದಲ್ಲಿ ಅಮೆರಿಕದ ನೀತಿ ಯಾವ ರೀತಿಯಲ್ಲಿ ವೈಫಲ್ಯ ಎಂಬುವುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಈ ಮಾತನ್ನು ನಾನು ಮಾತ್ರ ಅಲ್ಲ, ನನ್ನೊಂದಿಗೆ ಅನೇಕರು ಒಪ್ಪುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಇರಾಕ್ ಪ್ರಧಾನಿ ಮೊಹಮ್ಮದ್ ಶಿಯಾ ಅಲ್ ಸುಡಾನಿ ಅವರೊಂದಿಗೆ ಸಾರ್ವಜನಿಕ ಮಾತುಕತೆ ವೇಳೆ ರಷ್ಯಾ ಅಧ್ಯಕ್ಷ ಪ್ರಸ್ತಾಪಿಸಿದ್ದಾರೆ.

“ವಾಷಿಂಗ್ಟನ್ ಸಂಘರ್ಷವನ್ನು ನಿಯಂತ್ರಿಸುವಲ್ಲಿ ತನ್ನದೇ ಏಕಸ್ವಾಮ್ಯ ನೀತಿಯನ್ನು ಹೊಂದಲು ಪ್ರಯತ್ನಿಸಿತ್ತು. ಆದರೆ ದುರದೃಷ್ಟವಶಾತ್ ಅದು ಎರಡೂ ಕಡೆಯವರಿಗೆ ಸ್ವೀಕಾರಾರ್ಹವಾಗುವಂತಹ ನೀತಿಯನ್ನು ರಚಿಸುವುದಕ್ಕೆ ಚಿಂತಿಸಲಿಲ್ಲ. ಪ್ರತಿ ಬಾರಿಯೂ, ಪ್ಯಾಲೆಸ್ತೀನ್ ಜನರ ಮೂಲಭೂತ ಹಿತಾಸಕ್ತಿಗಳನ್ನು ಗಣನೆಗೆ ತೆಗೆದುಕೊಳ್ಳದೆ ಕೆಲವೊಂದು ನೀತಿ ರೂಪಿಸಿದೆ” ಎಂದು ಪುಟಿನ್ ಅಮೆರಿಕದ ವಿರುದ್ಧ ಆರೋಪಿಸಿದ್ದಾರೆ.

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ ನಿಲ್ಲಬೇಕೆಂದರೆ ಸ್ವತಂತ್ರ ಸಾರ್ವಭೌಮ ಪ್ಯಾಲೆಸ್ತೀನ್ ರಾಷ್ಟ್ರದ ಸ್ಥಾಪನೆಯೇ ಪರಿಹಾರ. ಪ್ಯಾಲೆಸ್ತೀನ್ ರಾಷ್ಟ್ರದ ರಚನೆಯ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಧಾರವನ್ನು ನಾವು ಕಾರ್ಯಗತಗೊಳಿಸಬೇಕಾಗಿದೆ ಎಂದು  ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X