ಕೆಲಸ ಕೇಳಲು ಹೋದ ಮನರೇಗಾ ಮಹಿಳಾ ಕಾರ್ಮಿಕರೊಬ್ಬರ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷರು ಹಲ್ಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಯರಗೋಳ ಗ್ರಾಮದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ. ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷ, ಸದಸ್ಯ ಹಾಗೂ ಸದಸ್ಯರೊಬ್ಬರ ಪುತ್ರನ ವಿರುದ್ಧ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೋಮವಾರ ಗ್ರಾಮದ ಮನರೇಗಾ ಯೋಜನೆಯ ಮಹಿಳಾ ಕಾರ್ಮಿಕರು, ಗ್ರಾಮ ಪಂಚಾಯತಿಗೆ ತೆರಳಿದ್ದಾರೆ. ಸ್ಥಳದಲ್ಲಿಯೇ ಇದ್ದ ಪಂಚಾಯತಿ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗೆ ಮನರೇಗಾ ಯೋಜನೆಯಡಿ ಕೆಲಸ ನೀಡುವಂತೆ ಬೇಡಿಕೊಂಡಿದ್ದಾರೆ. ಈ ವೇಳೆ ಅಲ್ಲಿಯೇ ಕುಳಿತಿದ್ದ ಪಂಚಾಯತಿ ಅಧ್ಯಕ್ಷ ಮತ್ತು ಸದಸ್ಯ ಹಾಗೂ ಸದಸ್ಯರೊಬ್ಬರ ಮಗ ಅವಾಚ್ಯ ಶಬ್ದಗಳಿಂದ ಮಹಿಳೆಯನ್ನು ನಿಂದಿಸಿದ್ದಲ್ಲದೇ, ಹೊಡೆದಿದ್ದಾರೆ ಎಂದು ಹಲ್ಲಿಗೊಳಗಾದ ಸಂತ್ರಸ್ತೆ ಪದ್ಮಾವತಿ ದೂರಿನಲ್ಲಿ ತಿಳಿಸಿದ್ದಾರೆ.