ಉಡುಪಿ | ಸಂಗೀತಗಾರ ಶ್ರೀ ಡಾ. ವಿದ್ಯಾಭೂಷಣ್‌ಗೆ ʼಕಾರಂತ್ ಹುಟ್ಟೂರು ಪ್ರಶಸ್ತಿʼ

Date:

Advertisements

ಶಿವರಾಮ ಕಾರಂತರು ಕನ್ನಡದ ಶ್ರೇಷ್ಠ ಲೇಖಕ, ಸಾಮಾಜಿಕ ಕಾರ್ಯಕರ್ತ, ಪರಿಸರವಾದಿ, ಯಕ್ಷಗಾನ ಕಲಾವಿದ, ಚಲನಚಿತ್ರ ನಿರ್ಮಾಪಕ ಹಾಗೂ ಚಿಂತಕರಾಗಿದ್ದು, ಸಾಹಿತ್ಯ ಕ್ಷೇತ್ರಕ್ಕೆ ಅಭೂತಪೂರ್ವ ಕೊಡುಗೆ ನೀಡಿದ್ದಾರೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

40 ವರ್ಷಗಳಿಗೂ ಹೆಚ್ಚು ಕಾಲ ಸಂಗೀತ ಕ್ಷೇತ್ರದಲ್ಲಿ ವಿಶೇಷ ಕೊಡುಗೆ ನೀಡಿದ ಅತ್ಯುತ್ತಮ ಗಾಯಕ ಮತ್ತು ಸಂಗೀತಗಾರ ಶ್ರೀ ಡಾ. ವಿದ್ಯಾಭೂಷಣ್ ಅವರಿಗೆ ಈ ವರ್ಷ ʼಕಾರಂತ್‌ ಹುಟ್ಟೂರು ಪ್ರಶಸ್ತಿʼ ನೀಡಿ ಗೌರವಿಸಿದೆ. ಶಿವರಾಮ ಕಾರಂತರ ಸ್ಮರಣಾರ್ಥ ಸ್ಥಾಪಿಸಿರುವ ʼಶಿವರಾಮ ಕಾರಂತ ಥೀಮ್ ಪಾರ್ಕ್ʼ ನಲ್ಲಿ ಕಾರ್ಯಕ್ರಮ ನಡೆಯಿತು.

ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಟ್ರಸ್ಟ್, ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಸಹಯೋಗದಲ್ಲಿ, ಶಿವರಾಮ ಕಾರಂತರ 121ನೇ ಜನ್ಮದಿನೋತ್ಸವ ಹಾಗೂ ಹುಟ್ಟೂರ 19ನೇ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Advertisements

ಕೋಟತಟ್ಟು ಗ್ರಾಮ ಪಂಚಾಯತ್, ಕಳೆದ 18 ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿರುವವರನ್ನು ಗುರುತಿಸಿ, ಹುಟ್ಟೂರು ಪ್ರಶಸ್ತಿ ನೀಡಿ ಗೌರವಿಸುವ ಕೆಲಸ ಮಾಡುತ್ತಿದೆ. ಸಂಗೀತ ಕ್ಷೇತ್ರಕ್ಕೆ ಅವರು ನೀಡುತ್ತಿರುವ ಕೊಡುಗೆ ನಿರಂತರವಾಗಿರಲಿ ಹಾಗೂ ಅವರ ಭವಿಷ್ಯ ಉಜ್ವಲವಾಗಿರಲಿ ಎಂದು ಆಶಿಸುತ್ತೇನೆ ಎಂದು ರಾಜ್ಯಪಾಲರು ಹರಸಿದರು.

ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮುಂದಕ್ಕೆ ಕೊಂಡೊಯ್ಯುವ ಕೆಲಸ ಮಾಡುತ್ತಿದೆ ಸಂತಸ ತಂದಿದೆ ಎಂದು ಪ್ರಶಂಸಿದರು.

ಕರ್ನಾಟಕದ ಕರಾವಳಿ ಉಡುಪಿ ಐತಿಹಾಸಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಮತ್ತು ಕಲೆ ಸಾಹಿತ್ಯ, ಸಮನ್ವಯ ಮತ್ತು ಸಾಮರಸ್ಯಕ್ಕೆ ಹೆಸರುವಾಸಿ. 13ನೇ ಶತಮಾನದಲ್ಲಿ, ಜಗದ್ಗುರು ಮಧ್ವಾಚಾರ್ಯರು ಇಲ್ಲಿ ಶ್ರೀಕೃಷ್ಣ ದೇವಾಲಯ ಮತ್ತು ಅಷ್ಟ ಮಠಗಳನ್ನು ಸ್ಥಾಪಿಸಿದ್ದಾರೆ. ಕಲೆ, ಸಂಸ್ಕೃತಿ ಮತ್ತು ತುಳುನಾಡಿನ ಶ್ರೀಮಂತ ಪರಂಪರೆ, ದಕ್ಷತೆ, ನಿಷ್ಠೆ ಮತ್ತು ವೀರರ ಗುಣಗಳನ್ನು ಇಲ್ಲಿನ ಜನರಲ್ಲಿ ಕಾಣಬಹುದು. ಇಂತಹ ಪುಣ್ಯಕ್ಷೇತ್ರದಲ್ಲಿ ಜನಿಸಿದ ಪರಮ ಗೌರವಾನ್ವಿತ ಡಾ.ಶಿವರಾಮ ಕಾರಂತರ 121ನೇ ಜಯಂತಿಯನ್ನು ಇಂದು ಆಚರಿಸುತ್ತಿರುವುದು ಸಂತಸದ ವಿಚಾರ. ಈ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಶಿವರಾಮ ಕಾರಂತ ಪ್ರತಿಷ್ಠಾನ, ಶಿವರಾಮ ಕಾರಂತ ಟ್ರಸ್ಟ್ ಮತ್ತು ಗ್ರಾಮ ಪಂಚಾಯತಿಗೆ ನನ್ನ ಕೃತಜ್ಞತೆಗಳು ಎಂದರು.

ಕೋಟ ಶಿವರಾಮ ಕಾರಂತರು 400ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಅವರ ಅಭೂತಪೂರ್ವ ಕೊಡುಗೆಯಿಂದಾಗಿ, ರಾಮಚಂದ್ರ ಗುಹಾ ಅವರು, “ಆಧುನಿಕ ಭಾರತದ ರವೀಂದ್ರನಾಥ ಟ್ಯಾಗೋರ್,” ಎಂದು ಕರೆದರು. ಶಿವರಾಮ್ ಕಾರಂತ್ ಅವರನ್ನು “ಕಡಲ ತೀರದ ಭಾರ್ಗವ” ಮತ್ತು “ವಾಕಿಂಗ್ ಎನ್ಸೈಕ್ಲೋಪೀಡಿಯಾ” ಎಂದೂ ಕರೆಯುತ್ತಾರೆ.

ಶಿವರಾಮ ಕಾರಂತರು ಗಾಂಧೀಜಿಯವರ ತತ್ವಗಳಿಂದ ಪ್ರಭಾವಿತರಾಗಿದ್ದರು. ಕಾರ್ನಾಡ್ ಸದಾಶಿವ ರಾವ್ ಅವರ ನೇತೃತ್ವದಲ್ಲಿ, ಕರ್ನಾಟಕದಲ್ಲಿ ಖಾದಿ ಮತ್ತು ಸ್ವದೇಶಿ ಪ್ರಚಾರ ಮಾಡಿದರು. ಪರಿಸರದ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಕಾರಂತರು ತಮ್ಮ ಕಾದಂಬರಿಗಳಲ್ಲಿ ಪರಿಸರ ಜಾಗೃತಿಯನ್ನು ಪ್ರಸ್ತಾಪಿಸಿದ್ದಾರೆ. ಅವರ ಪರಿಸರ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವೂ ಅವರಿಗೆ ಪರಿಸರ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ಪ್ರಶಂಸಿದರು.

ಕಾರ್ಯಕ್ರಮದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಶಾಸಕ ಗುರುರಾಜ್ ಗಂಟಿಹೊಳೆ, ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಯಶಪಾಲ್, ಎ.ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ಕೋಟತಟ್ಟು ಗ್ರಾ.ಪಂ.ಅಧ್ಯಕ್ಷ ಸತೀಶ್ ಕುಂದರ್ ಮುಂತಾದವರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

ಗದಗ | ಬಸವಾದಿ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಎಸ್. ವಿ. ಸಂಕನೂರು

"12ಣೆ ಶತಮಾನದಲ್ಲಿ ಶರಣೆಯರು ಮಹಿಳೆಯರಿಗೆ ಸ್ವತಂತ್ರವಾಗಿ ಬದುಕಬೇಕು ಎಂಬ ಆಶಯವನ್ನು ಹೊಂದಿದ್ದರು....

ಶ್ರೀರಂಗಪಟ್ಟಣ | ಪರಿಸರಸ್ನೇಹಿ ಗಣಪನ ಪ್ರತಿಷ್ಠಾಪನೆಗಾಗಿ ಜಾಗೃತಿ ಜಾಥಾ

ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ...

Download Eedina App Android / iOS

X