ಐಸಿಸಿ ಏಕದಿನ ವಿಶ್ವಕಪ್ 2023 14ನೇ ಆವೃತ್ತಿಯ 9ನೇ ಪಂದ್ಯ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಭಾರತ ತಂಡ ತನ್ನ ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ.
ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ
ಡೆಂಗ್ಯೂ ಕಾರಣದಿಂದಾಗಿ ಆರಂಭಿಕ ಆಟಗಾರ ಶುಭಮನ್ ಗಿಲ್ ಆಟದಿಂದ ಹೊರಗುಳಿದಿರುವುದರಿಂದ, ಏಕದಿನ ವಿಶ್ವಕಪ್‌ನ ತನ್ನ ಎರಡನೇ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರನಾಗಿ ಇಶಾನ್ ಕಿಶನ್ ಮತ್ತೊಂದು ಅವಕಾಶ ಪಡೆಯಲಿದ್ದಾರೆ.
ಭಾರತವು ಆಸ್ಟ್ರೇಲಿಯಾ ವಿರುದ್ಧದ ತನ್ನ ಮೊದಲ ಪಂದ್ಯದಲ್ಲಿ 200 ರನ್‌ಗಳ ಗುರಿಯನ್ನು ಸುಲಭವಾಗಿ ಬೆನ್ನಟ್ಟಿ ಆಸಿಸ್ ತಂಡವನ್ನು ಸುಲಭವಾಗಿ ಸೋಲಿಸಿತ್ತು. ಕೆ ಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಅರ್ಧಶತಕಗಳನ್ನು ಗಳಿಸಿ ತಂಡದ ಗೆಲುವಿನ ರೂವಾರಿಗಳಾಗಿದ್ದರು. ಮತ್ತೊಂದೆಡೆ, ಬಾಂಗ್ಲಾದೇಶ ವಿರುದ್ಧದ ತನ್ನ ಆರಂಭಿಕ ಪಂದ್ಯದಲ್ಲಿ ಅಫ್ಘಾನಿಸ್ತಾನ ಸೋಲನ್ನು ಅನುಭವಿಸಿ ಹಿನ್ನಡೆ ಅನಿಭವಿಸಿದೆ.
ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ರೋಚಕ ಹಣಾಹಣಿಯಲ್ಲಿ ಶ್ರೀಲಂಕಾ ವಿರುದ್ಧ ಪಾಕ್‌ಗೆ ಜಯ
ಇಲ್ಲಿಯವರೆಗೂ ಭಾರತ ಮತ್ತು ಅಫ್ಘಾನಿಸ್ತಾನ ಏಕದಿನ ವಿಶ್ವಕಪ್‌ನಲ್ಲಿ ಎರಡು ಬಾರಿ ಮುಖಾಮುಖಿಯಾಗಿದ್ದು, ಎರಡೂ ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದುಕೊಂಡಿದೆ. ಈ ಪಂದ್ಯದಲ್ಲೂ ರೋಹಿತ್ ಶರ್ಮಾ ಪಡೆಯೇ ಗೆಲುವಿನ ನೆಚ್ಚಿನ ತಂಡವಾಗಿದೆ.
India entertains Afghanistan in Delhi 🏏
Can the hosts make it two wins in two? 🤔#CWC23 | #INDvAFG pic.twitter.com/nPfzAhwcE9
— ICC Cricket World Cup (@cricketworldcup) October 11, 2023
ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ಕೊಹ್ಲಿ ಅವರಿಗೆ ತವರು ಮೈದಾನ ಆಗಿದ್ದು, ಇಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ. ನಾಲ್ಕು ವರ್ಷಗಳ ನಂತರ ಕೊಹ್ಲಿ ಇಲ್ಲಿ ಪಂದ್ಯವನ್ನು ಆಡುತ್ತಿದ್ದು ಇಲ್ಲಿಯವರೆಗೆ 7 ಏಕದಿನ ಪಂದ್ಯಗಳಿಂದ 44.4 ಸರಾಸರಿಯಲ್ಲಿ 222 ರನ್ ಗಳಿಸಿದ್ದಾರೆ. 112 ವೈಯಕ್ತಿಕ ಗರಿಷ್ಠ ರನ್ ಆಗಿದೆ.
ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದ ಪಿಚ್ ಬ್ಯಾಟಿಂಗ್‌ಗೆ ಹೆಚ್ಚು ಉಪಯುಕ್ತವಾಗಿದೆ. ಬೌಲರ್‌ಗಳಿಗೆ ಪಿಚ್ ಹೆಚ್ಚು ಸಹಕರಿಸುವುದಿಲ್ಲ. ಕಳೆದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ದಕ್ಷಿಣ ಆಫ್ರಿಕಾ ಬರೋಬ್ಬರಿ 428 ರನ್ ಬಾರಿಸಿತ್ತು. ಶ್ರೀಲಂಕಾ ಕೂಡ ಬೃಹತ್ ರನ್‌ಗಳ ಗುರಿಯನ್ನು ಬೆನ್ನಟ್ಟಿ 300 ಗಡಿಯನ್ನು ದಾಟಿತ್ತು. ಈ ಹಿನ್ನೆಲೆಯಲ್ಲಿ ಟಾಸ್ ಗೆದ್ದ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.
ಉಭಯ ತಂಡಗಳ 11ರ ಬಳಗ
ಭಾರತ:
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಅಫ್ಘಾನಿಸ್ತಾನ:
ಹಶ್ಮತುಲ್ಲಾ ಶಾಹಿದಿ(ನಾಯಕ), ರಹಮಾನುಲ್ಲಾ ಗುರ್ಜಾಜ್(ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಹಮತ್ ಶಾ, ಮೊಹಮ್ಮದ್ ನಬಿ, ನಜಿಬುಲ್ಲಾ ಝದ್ರಾನ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್ ಉಲ್ ಹಕ್, ಫಜಲ್ಹಕ್ ಫರ್.
ಪಂದ್ಯ ನೇರ ಪ್ರಸಾರ:
ಸ್ಟಾರ್ ಸ್ಪೋರ್ಟ್ಸ್, ಡಿಡಿ ಸ್ಪೋರ್ಟ್ಸ್, ಹಾಟ್ ಸ್ಟಾರ್ ಆಪ್
ಪಂದ್ಯ ಆರಂಭ: ಮಧ್ಯಾಹ್ನ 2 ಗಂಟೆ