ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಹಾಗೂ ಹೋರ್ಡಿಂಗ್ಸ್ ಹಾವಳಿಯನ್ನು ತಡೆಗಟ್ಟಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಈ ಹಿಂದೆ ಹೈಕೋರ್ಟ್ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆದೇಶಿಸಿತ್ತು. ಆದರೆ, ದಿನದಿಂದ ದಿನಕ್ಕೆ ನಗರದಲ್ಲಿ ಬ್ಯಾನರ್‌ಗಳ ಹಾವಳಿ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆ, ಹೈಕೋರ್ಟ್ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ನಗರದಲ್ಲಿರುವ ಬ್ಯಾನರ್‌ಗಳ ಸರ್ವೇ ನಡೆಸುವಂತೆ ಆದೇಶಿಸಿದೆ.
ಸಿಜೆ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.
ಹೈಕೋರ್ಟ್ ಆದೇಶದಲ್ಲೇನಿದೆ?
“ಬಿಬಿಎಂಪಿ ಎಷ್ಟು ಜಾಹೀರಾತುಗಳಿಗೆ ಅನುಮತಿ ನೀಡಿದೆ ಮತ್ತು ಈ ಜಾಹೀರಾತುಗಳಿಂದ ಎಷ್ಟು ಆದಾಯ ಸಂಗ್ರಹಿಸಿದೆ. ಜತೆಗೆ ನಗರದಲ್ಲಿ ನಿಯಮ ಮೀರಿ ಫ್ಲೆಕ್ಸ್, ಬ್ಯಾನರ್ ಹಾಗೂ ಹೋರ್ಡಿಂಗ್ಸ್ ಹಾಕಿದವರ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ. ಅವಧಿ ಮೀರಿದ ಜಾಹೀರಾತು ಫಲಕಗಳ ವಿರುದ್ಧ ಏನು ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ಬಗ್ಗೆ ಸರ್ವೇ ನಡೆಸಿ ನವೆಂಬರ್ 28ರೊಳಗೆ ವರದಿ ಸಲ್ಲಿಸಬೇಕು” ಎಂದು ಬಿಬಿಎಂಪಿಗೆ ಹೈಕೋರ್ಟ್ ಸೂಚಿಸಿದೆ.
ಈ ಸುದ್ದಿ ಓದಿದ್ದೀರಾ? ಅತ್ತಿಬೆಲೆ ಪಟಾಕಿ ದುರಂತ | ನಾಲ್ವರು ಅಧಿಕಾರಿಗಳ ಅಮಾನತು
“ಈಗಾಗಲೇ ಅಕ್ರಮವಾಗಿ ಬ್ಯಾನರ್ ಹಾಕುವುದರಿಂದ ಬಿಬಿಎಂಪಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ಜಾಹೀರಾತಿನಿಂದ ಪಡೆಯಬೇಕಾದ ತೆರಿಗೆಯನ್ನು ನಾಗರಿಕರ ಮೇಲೆ ಹೊರಿಸಲಾಗುತ್ತಿದೆ. ಇದು ಸಂಪೂರ್ಣ ಬಿಬಿಎಂಪಿಯ ವೈಫಲ್ಯ ಇದರ ಹೊರೆ ಜನಸಾಮಾನ್ಯರ ಮೇಲೆ ಬಿದ್ದಿದೆ” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.