ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ ಅವರು ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದಾರೆ. ಶಿರಹಟ್ಟಿ ತಾಲೂಕಿನ ಪ್ರತಿ ಹಳ್ಳಿಗಳ ಸಮಸ್ಯೆಗಳು ಹಾಗೂ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಬಗೆಹರಿಸಿದ್ದು, ಉಳಿದ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
“ಸರ್ಕಾರಿ ಕಚೇರಿಗಳಿಗೆ ಅಲೆದಾಡಿ ಪ್ರಯೋಜನವಾಗಲಿಲ್ಲ. ಜಿಲ್ಲಾಧಿಕಾರಿಗಳು ಸಮಸ್ಯೆ ಬಗೆಹರಿಸಿದ್ದಾರೆ” ಎಂದು ಜನತಾ ದರ್ಶನಕ್ಕೆ ಬಂದಿದ್ದ ಓರ್ವ ಮಹಿಳೆ ಹೇಳಿದ್ದಾರೆ.
ಜನತಾ ದರ್ಶನದಲ್ಲಿ ಶಿರಹಟ್ಟಿ ತಾಲೂಕಿನ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ನಿಂಗಪ್ಪ ಓಲೇಕಾರ, ಮುಖ್ಯ ಯೋಜನಾ ಅಧಿಕಾರಿ ಕಂಬಾಳಿಮಠ, ಶಿರಹಟ್ಟಿ ತಾಲೂಕಿನ ದಂಡಾಧಿಕಾರಿ ಅನಿಲ ಬಡಗೇರ ಇದ್ದರು.
ವರದಿ: ಮಲ್ಲೇಶ ಮಣ್ಣಮ್ಮನವರ, ಸಿಟಿಜನ್ ಜರ್ನಲಿಸ್ಟ್, ಶಿರಹಟ್ಟಿ