ಚಿತ್ರದುರ್ಗ | ಬಿಜೆಪಿಗೆ ಮಾಜಿ ಶಾಸಕಿ ಪೂರ್ಣಿಮಾ ಗುಡ್‌ ಬೈ; ಅ.20ರಂದು ಕಾಂಗ್ರೆಸ್‌ಗೆ ಸೇರ್ಪಡೆ

Date:

Advertisements

ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಪತಿಗೆ ಕಾಂಗ್ರೆಸ್‌ ಟಿಕೆಟ್ ಕೊಡಿಸುವ ಉದ್ದೇಶದಿಂದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ, ಆ ಬಗ್ಗೆ ಮಾತನಾಡಿರುವ ಪೂರ್ಣಿಮಾ ಅವರು ಅಕ್ಟೋಬರ್ 20ರಂದು ಕಾಂಗ್ರೆಸ್‌ ಸೇರಲಿದ್ದೇನೆ ಎಂದು ಹೇಳಿದ್ದಾರೆ.

ಕಳೆದ ಸರ್ಕಾರದ ಅವಧಿಯಲ್ಲಿ ಪೂರ್ಣಿಮಾ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಶಾಸಕಿಯಾಗಿದ್ದರು. ಮೇ ತಿಂಗಳಲ್ಲಿ ನಡೆದ ಚುನಾವಣೆಯಲ್ಲಿ ಸೋಲುಂಡಿದ್ದರು. ಇದೀಗ, ವಿಧಾನ ಪರಿಷತ್‌ಗೆ ಶಿಕ್ಷಕರ ಕ್ಷೇತ್ರದಿಂದ ಸದಸ್ಯರ ಆಯ್ಕೆಗೆ ಚುನಾವಣೆಯ ಸಮೀಪಿಸುತ್ತಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಅಭ್ಯರ್ಥಿಯಾಗಿ ಪೂರ್ಣಿಮಾ ಅವರ ಪತಿ ಡಿ.ಟಿ ಶ್ರೀನಿವಾಸ್ ಕಾಂಗ್ರೆಸ್‌ನಿಂದ ಕಣಕ್ಕಿಳಿಯಲು ಮುಂದಾಗಿದ್ದಾರೆ. ಶ್ರೀನಿವಾಸ್ ಅವರೊಂದಿಗೆ ಪೂರ್ಣಿಮಾ ಅವರೂ ಕಾಂಗ್ರೆಸ್‌ ಸೇರಲಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಪೂರ್ಣಿಮಾ ಶ್ರೀನಿವಾಸ್, “ಈ ಹಿಂದೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪಕ್ಷಕ್ಕೆ ಬರುವಂತೆ ಆಹ್ವಾನಿಸಿದ್ದರು. ನಾನು ಪ್ರತಿನಿಧಿಸಿದ್ದ ಕ್ಷೇತ್ರವನ್ನು ಬಿಡಬಾರದೆಂಬ ಕಾರಣಕ್ಕೆ ಹಿರಿಯೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ. ಆದರೆ, ಅನಿವಾರ್ಯ ಕಾರಣಗಳಿಂದ ಸೋಲು ಕಾಣಬೇಕಾಯಿತು. ಅಂತಿಮವಾಗಿ ಅಕ್ಟೋಬರ್ 20 ರಂದು ಕಾಂಗ್ರೆಸ್ ಸೇರುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

Advertisements

“ಬಿಜೆಪಿಯಿಂದ ನಾನು ಶಾಸಕಿಯಾಗಿದ್ದೆ. ಅಂದಿನ ಸರ್ಕಾರ ಹಿರಿಯೂರು ಕ್ಷೇತ್ರಕ್ಕೆ ಅನುದಾನದಲ್ಲಿ ಕೊರತೆ ಮಾಡಿರಲಿಲ್ಲ. ಆದರೆ, ಗೊಲ್ಲ ಸಮುದಾಯಕ್ಕೆ ನೀಡಬೇಕಾದ ಸೌಲಭ್ಯಗಳನ್ನು ನೀಡುವಲ್ಲಿ ಸಾಕಷ್ಟು ಹಿಂದೇಟು ಹಾಕಿತ್ತು. 2020ರಲ್ಲಿ ತರಾತುರಿಯಾಗಿ ಗೊಲ್ಲ ಅಭಿವೃದ್ದಿ ನಿಗಮ ಸ್ಥಾಪಿಸಿತು. ಬಳಿಕ, ಕಾಡುಗೊಲ್ಲ ಅಭಿವೃದ್ದಿ ನಿಗಮ ಎಂದು ಹೆಸರು ಬದಲಾಯಿಸಿ ಗೊಂದಲಗಳನ್ನು ಸೃಷ್ಠಿಸಿತು. ನಿಗಮದಿಂದಲೂ ಯಾವ ಪ್ರಯೋಜನ ಆಗಲಿಲ್ಲ” ಎಂದು ದೂರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X