ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದ ಪಟಾಕಿ ಅಂಗಡಿಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಪ್ರಕರಣದಲ್ಲಿ ಒಟ್ಟು ಸಾವಿನ ಸಂಖ್ಯೆ 15ಕ್ಕೆ ಏರಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿತ್ತಿದ್ದ ದಿನೇಶ್ ಎಂಬಾತ ಮೃತ ಯುವಕ. ಅಗ್ನಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರಿಂದ ಕೊನೆಯುಸಿರೆಳೆದಿದ್ದಾನೆ. ಅಕ್ಟೋಬರ್ 7ರಂದು ಪಟಾಕಿ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ 14 ಮಂದಿ ಸಜೀವ ದಹನವಾಗಿ, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಕಾರ್ಮಿಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಪಟಾಕಿ ಜಪ್ತಿ
ದೀಪಾವಳಿ ಹಬ್ಬಕ್ಕಾಗಿ ಮಳಿಗೆಯಲ್ಲಿ ಹೆಚ್ಚು ಪಟಾಕಿಗಳನ್ನು ಶೇಖರಣೆ ಮಾಡಲಾಗಿತ್ತು. ಆದರೆ, ಏಕಾಏಕಿ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ದುರಂತ ಸಂಭವಿಸಿತ್ತು.