ಬಸವಣ್ಣನವರ ಭಾವಚಿತ್ರವನ್ನು ಅಲ್ಲಲ್ಲಿ ಸುಟ್ಟು ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹಲಕರ್ಟಿ ಗ್ರಾಮ ಪಂಚಾಯತಿ ಎದುರು ಬಸವ ಜಯಂತಿ ದಿನ ಬಸವಣ್ಣನವರ ಭಾವಚಿತ್ರವಿದ್ದ ಫ್ಲೆಕ್ಸ್ ಅಳವಡಿಸಲಾಗಿತ್ತು. ಮಂಗಳವಾರ ರಾತ್ರಿ ದುಷ್ಕರ್ಮಿಗಳು ಆ ಭಾವಚಿತ್ರವನ್ನು ಅಲ್ಲಲ್ಲಿ ಸುಟ್ಟು ವಿಕೃತಿ ಮೆರೆದಿದ್ದಾರೆ.
ಘಟನೆಯನ್ನು ಖಂಡಿಸಿ ವೀರಶೈವ–ಲಿಂಗಾಯತ ಸಮುದಾಯದ ಮುಖಂಡರು ಗ್ರಾಮದ ಸಮೀಪವಿರುವ ಕಲಬುರಗಿ–ಯಾದಗಿರಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.