ಕಲಬುರಗಿ | ಧಮ್ಮ ದೀಕ್ಷಾ ಸಮಾರಂಭಕ್ಕೆ ಬೌದ್ಧ ಮಹಾಸಭಾ ಆಹ್ವಾನ

Date:

Advertisements

68ನೇ ಧಮ್ಮ ಚಕ್ರ ಪರಿವರ್ತನಾ ದಿನದ ಅಂಗವಾಗಿ ಕಲಬುರಗಿಯಲ್ಲಿ ಭಾರತೀಯ ಬೌದ್ಧ ಮಹಾಸಭಾವು ಧಮ್ಮ ದೀಕ್ಷಾ ಸಮಾರಂಭವನ್ನು ಅಕ್ಟೋಬರ್ 14ರಂದು ಆಯೋಜಿಸಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೌದ್ಧ ಉಪಸಕ/ಕಿಯರು ಭಾಗಿಯಾಗಬೇಕು ಎಂದು ಮಹಾಸಭಾದ ತಾಲೂಕು ಅಧ್ಯಕ್ಷ ಮಲ್ಲಣ್ಣ ಕೊಡಚಿ ಆಹ್ವಾನಿಸಿದ್ದಾರೆ.

ಜೇವರ್ಗಿಯಲ್ಲಿ ಕರಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು. ಅ.14ರ ಸಂಜೆ 4:30ಕ್ಕೆ ಕಲಬುರಗಿಯ ದೀಕ್ಷಾಭೂಮಿ (ಎಂಎಸ್‌ಕೆ ಮಿಲ್) ಮೈದಾನದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ ಎಂದು ತಿಳಿಸಿದರು.

“ಅಸಮಾನತೆಯಿಂದ ತುಂಬಿದ ಹಿಂದೂ ಧರ್ಮವನ್ನು ಬಿಟ್ಟು ಈ ದೇಶದ ಮೂಲ ಧರ್ಮವಾದ ಬೌದ್ಧ ಧರ್ಮದ ದೀಕ್ಷೆ ಪಡೆದು ಪ್ರಬುದ್ಧರಾಗೋಣ. ಸಮಾರಂಭಕ್ಕೆ ತಾಲೂಕಿನ ಸಮಸ್ತ ಬೌದ್ದ ಉಪಾಸಕರು, ಉಪಾಸಕಿಯರು ತಮ್ಮ ಕುಟುಂಬದೊಡನೆ ಭಾಗವಹಿಸಬೇಕು” ಎಂದು ಮನವಿ ಮಾಡಿದರು.

Advertisements

ಈ ಸಂದರ್ಭದಲ್ಲಿ ನಿಜಲಿಂಗ ದೊಡ್ಡಮನಿ, ರಾಜಶೇಖರ್ ಶಿಲ್ಪಿ, ಶರಣು ಎಮ್ ಬಡಿಗೇರ್, ಖಜಾಂಚಿ ಸಿದ್ದು ಮೈಂದರಗಿ, ಶ್ರೀಮಂತ ಕೀಲೆಧಾರ, ರಾಹುಲ್ ಪಂಚಶೀಲ, ಶ್ರೀಮಂತ ಹರನೂರ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X