ಬೆಳಗಾವಿ | ಆರೋಗ್ಯಾಧಿಕಾರಿ ಕಚೇರಿಯಲ್ಲಿ ಎಣ್ಣೆ ಪಾರ್ಟಿ; ಏಳು ಸಿಬ್ಬಂದಿ ಅಮಾನತು

Date:

Advertisements

ಬೆಳಗಾವಿಯ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಘಟನೆಗೆ ಸಂಬಂಧಪಟ್ಟಂತೆ ಏಳು ಮಂದಿ ಸಿಬ್ಬಂದಿಗಳನ್ನುಅಮಾನತು ಮಾಡಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿಯ ಕಾರು ಚಾಲಕ ಮಂಜುನಾಥ ಪಾಟೀಲ್​​, ಸಿಬ್ಬಂದಿ ಮಹೇಶ ಹಿರೇಮಠ, ರಮೇಶ ನಾಯಕ, ಸತ್ಯಪ್ಪ ತಮ್ಮನ್ನವರ, ಅನಿಲ ತಿಪ್ಪನ್ನವರ, ದೀಪಕ ಗಾವಡೆ, ಯಲ್ಲಪ್ಪ ಮುನ್ನವಳ್ಳಿ ಅಮಾನತುಗೊಂಡಿದ್ದಾರೆ.

ಅಮಾನತಾದ ಸಿಬ್ಬಂದಿಗಳು ಟಿಳಕವಾಡಿಯಲ್ಲಿರುವ ಡಿಎಚ್​​ಒ ಕಚೇರಿಯ ಹಿಂಭಾಗದ ಕೊಠಡಿಯಲ್ಲಿ ಗಾಂಧಿ ಫೋಟೋ ಎದುರೇ ಮದ್ಯಪಾನ ಮಾಡಿದ್ದರು. ಆ ಘಟನೆಯನ್ನು ವಿಡಿಯೋ ಮಾಡಲಾಗಿತ್ತು. ವಿಡಿಯೋವನ್ನು ಆಧರಿಸಿ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಆದರೆ, ಮದ್ಯಪಾನದ ಘಟನೆ ಯಾವಾಗ ನಡೆದಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿದುಬಂದಿದೆ.

Advertisements

ಈ ವಿಡಿಯೋದಲ್ಲಿ ಸಿಬ್ಬಂದಿಗಳು ಮದ್ಯಪಾನ ಮತ್ತು ಧೂಮಪಾನ ಮಾಡುತ್ತಿರುವುದು, ಡ್ಯಾನ್ಸ್ ಮಾಡುತ್ತಿರುವುದು ಹಾಗೂ ಹರಟೆ ಮಾತುಗಳನ್ನಾಡುತ್ತಿರುವುದು ಸೆರೆಯಾಗಿತ್ತು. ಈ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ಟೀಕೆ ಕೂಡ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಡಿಎಚ್ಒ ಡಾ. ಮಹೇಶ ಕೋಣಿ ಪಾರ್ಟಿಯಲ್ಲಿ ಭಾಗಿಯಾಗಿದ್ದ ಏಳು ಮಂದಿ ಸಿಬ್ಬಂದಿಗಳ ವಿರುದ್ಧ ಕ್ರಮ‌ ಕೈಗೊಂಡಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಎಚ್​ಒ ಡಾ. ಮಹೇಶ ಕೋಣಿ, “ಮೇಲ್ನೋಟಕ್ಕೆ ವಿಡಿಯೋದಲ್ಲಿ, ನಮ್ಮ ಸಿಬ್ಬಂದಿಗಳೇ ಪಾರ್ಟಿ ಮಾಡಿರುವುದು ಕಂಡುಬಂದಿದೆ. ಇದಕ್ಕೂ ಮುಂಚೆ ಈ ಘಟನೆ ನಮ್ಮ ಗಮನಕ್ಕೆ ಬಂದಿಲ್ಲ. ಕೂಲಂಕಷವಾಗಿ ತನಿಖೆ ಮಾಡಿ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುತ್ತೇನೆ. ಸರ್ಕಾರಿ ಸಿಬ್ಬಂದಿ, ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡುವುದು ಸರ್ಕಾರಿ ಕರ್ತವ್ಯಕ್ಕೆ ವಿರುದ್ಧವಾಗಿದೆ. ಈ ರೀತಿ ಮಾಡಿರುವುದು ತಪ್ಪು. ಈ ವಿಡಿಯೋವನ್ನು ಪರಿಶೀಲನೆ ಮಾಡಿ ತಪ್ಪು ಕಂಡು ಬಂದಲ್ಲಿ ನಮ್ಮ ಕಚೇರಿ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುತ್ತೇನೆ,” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X