ಮೈಸೂರು | ಸಾರ್ವಜನಿಕ ಆಕ್ರೋಶಕ್ಕೆ ಮಣಿದ ಪೊಲೀಸ್ ಇಲಾಖೆ; ಮಹಿಷ ದಸರಾಗೆ ಸಮ್ಮತಿ

Date:

Advertisements

ಮೈಸೂರಿನಲ್ಲಿ ಅಕ್ಟೋಬರ್ 13ರಂದು ಮಹಿಷ ದಸರಾ ಆಚರಿಸಲು ಅನುಮತಿ ನಿರಾಕಸಿದ್ದ ಪೊಲೀಸರು, ಇದೀಗ ಸಮ್ಮತಿ ನೀಡಿದ್ದಾರೆ. ಅನುಮತಿಯಲ್ಲಿ ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ.

ಮಹಿಷ ದಸರಾ ನಡೆಸಲು ಅನುಮತಿ ಕೋರಿ ಮಹಿಷ ದಸರಾ ಆಚರಣೆ ಸಮಿತಿಯ ಅಧ್ಯಕ್ಷ ಪುರುಷೋತ್ತಮ್ ಅವರು ಮನವಿ ಸಲ್ಲಿಸಿದ್ದರು. ಆದರೆ, ಆಚರಣೆ ಅವಕಾಶವಿಲ್ಲವೆಂದು ಪೊಲೀಸರು ಹೇಳಿದ್ದರು. ಈ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೊಲೀಸರ ನಡೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಮೈಸೂರು ಚಲೋಗೆ ಕರೆ ಕೊಡಲಾಗಿತ್ತು. ಅಲ್ಲದೆ, ಮಹಿಷ ದಸರಾ ಆಚರಿಸಿಯೇ ಆಚರಿಸುತ್ತೇವೆ ಎಂದು ಪುರುಷೋತ್ತಮ್ ಅವರು ಹೇಳಿದ್ದರು.

ಇದೆಲ್ಲದರ ಬಳಿಕ, ಸಾರ್ವಜನಿಕ ಒತ್ತಡಕ್ಕೆ ಮಣಿದಿರುವ ಪೊಲೀಸರು ಮಹಿಷ ದಸರಾ ಆಚರಣೆಗೆ ಸಮ್ಮತಿ ನೀಡಿದ್ದಾರೆ. ಮೈಸೂರಿನ ಪುರಭವನದ ಬಳಿ ಮಹಿಷ ಉತ್ಸವ ಮತ್ತು ಧಮ್ಮ ದೀಕ್ಷಾ ಕಾರ್ಯಕ್ರಮ ನಡೆಯಲಿದೆ. ಈ ವೇಳೆ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಕೆಲವು ಷರತ್ತುಗಳನ್ನು ವಿಧಿಸಿರುವುದಾಗಿ ಹೇಳಿದ್ದಾರೆ.

Advertisements

ಪೊಲೀಸರು ವಿಧಿಸಿರುವ ಪ್ರಮುಖ ಷರತ್ತುಗಳು

  • ಸ್ಥಳೀಯ ಪೊಲೀಸ್ ಅಧಿಕಾರಿಗಳು ಸಂದರ್ಭಕ್ಕೆ ಅನುಸಾರವಾಗಿ ನೀಡುವ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು.
  • ಮೈಸೂರು ನಗರ ಪೊಲೀಸ್ ಕಮಿಷನರೇಟ್‌ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಯಲ್ಲಿರುವ ಕಾರಣ ಮೆರವಣಿಗೆ/ಪ್ರತಿಭಟನೆ ನಡೆಸದೆ, ನೇರವಾಗಿ ಕಾರ್ಯಕ್ರಮ ಸ್ಥಳಕ್ಕೆ ಬಂದು ಕಾರ್ಯಕ್ರಮ ನಡೆಸಬೇಕು.
  • ಪರ-ವಿರೋಧ ಘೋಷಣೆಗಳನ್ನು ಕೂಗಬಾರದು. ಪಟಾಕಿ ಸಿಡಿಸಬಾರದು.
  • ವೇದಿಕೆ ನಿರ್ಮಾಣಕ್ಕೆ ಪಾಲಿಕೆಯಿಂದ ಅನುಮತಿ ಪಡೆಯಬೇಕು. ಪಾಲಿಕೆ ನಿಯಮಗಳನ್ನು ಪಾಲಿಸಬೇಕು.
  • ಜಾತಿ, ಮತ, ಧರ್ಮಗಳ ವಿಷಯವಾಗಿ ಪ್ರಯೋದನಾಕಾರಿ ಭಾಷಣ ಮಾಡಬಾರದು.

WhatsApp Image 2023 10 12 at 3.03.35 PM

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

Download Eedina App Android / iOS

X