ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಠದ ವಿದ್ಯಾಪೀಠಗಳ ಕಾರ್ಯದರ್ಶಿ ಪರಮಶಿವಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ ಎಂದು ‘ಬಾರ್ ಆ್ಯಂಡ್ ಬೆಂಚ್’ ವರದಿ ಮಾಡಿದೆ.
ಮಠದ ಹಾಸ್ಟೆಲ್ನಲ್ಲಿದ್ದ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ನೆರವು ನೀಡಿದ ಆರೋಪವನ್ನು ಪರಮಶಿವಯ್ಯ ಎದುರಿಸುತ್ತಿದ್ದಾರೆ.
ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ನೇತೃತ್ವದ ಪೀಠದ ಜಾಮೀನು ಮಂಜೂರು ಮಾಡಿದ್ದು, ಮುರುಘಾಶ್ರೀ ಪ್ರಕರಣದಲ್ಲಿ ಜಾಮೀನು ಪಡೆದ ಆರೋಪಿಗಳ ಪೈಕಿ ಪರಮಶಿವಯ್ಯ ಮೊದಲಿಗರಾಗಿದ್ದಾರೆ.
ಪರಮಶಿವಯ್ಯ
ಪರಮಶಿವಯ್ಯ ಅವರ ಪರವಾಗಿ ಹಿರಿಯ ವಕೀಲ ಸಿ ವಿ ನಾಗೇಶ್ ವಾದಿಸಿದ್ದರೆ, ವಕೀಲರಾದ ಕೆಬಿಕೆ ಸ್ವಾಮಿ ವಕಾಲತ್ತು ವಹಿಸಿದ್ದರು.
[ಬ್ರೇಕಿಂಗ್] ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಠದ ವಿದ್ಯಾಪೀಠಗಳ ಕಾರ್ಯದರ್ಶಿ ಪರಮಶಿವಯ್ಯ ಅವರಿಗೆ ಜಾಮೀನು ಮಂಜೂರು ಮಾಡಿದ ಕರ್ನಾಟಕ ಹೈಕೋರ್ಟ್.#KarnatakaHighCourt @kbkindia #MurughaMutt pic.twitter.com/hbMgiVum0a
— ಬಾರ್ & ಬೆಂಚ್ – Kannada Bar & Bench (@Kbarandbench) October 13, 2023
ಮುರುಘಾಶ್ರೀ ವಿರುದ್ಧ 2022ರ ಆ.26ರಂದು ಮೊದಲು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಆ.26ಕ್ಕೆ ಚಿತ್ರದುರ್ಗ ಗ್ರಾಮೀಣ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಪ್ರಕರಣದ ಎ1 ಆರೋಪಿ ಮುರುಘಾಶ್ರೀಗಳನ್ನು 2022ರ ಸೆಪ್ಟಂಬರ್ 1ರಂದು ಚಿತ್ರದುರ್ಗದ ಮಠದಿಂದಲೇ ಬಂಧಿಸಲಾಗಿತ್ತು.
ಮುರುಘಾಶ್ರೀ ವಿರುದ್ಧ ಒಟ್ಟು ಎರಡು ಪ್ರಕರಣ ದಾಖಲಾಗಿವೆ. 2ನೇ ಪೋಕ್ಸೋ ಪ್ರಕರಣ ಸಂಬಂಧ ಮಠದ ಹಾಸ್ಟೆಲ್ನಲ್ಲಿದ್ದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ದೃಢಪಟ್ಟಿದ್ದು, ತನಿಖೆ ನಡೆಸಿರುವ ಪೊಲೀಸರು ಈಗಾಗಲೇ 761 ಪುಟಗಳ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಎ ಮತ್ತು ಬಿ ಎರಡು ಭಾಗವಾಗಿ ಚಾರ್ಜ್ ಶೀಟ್ ಅನ್ನು ಸಲ್ಲಿಸಿದ್ದಾರೆ.