ಬೆಂಗಳೂರು | ಗುಂಡು ಹಾರಿಸಿ ಕೆಜಿ ಚಿನ್ನ ಕಳ್ಳತನ; ಹೈದರಾಬಾದ್‌ನತ್ತ ಪರಾರಿಯಾಗುತ್ತಿದ್ದ ಓರ್ವನ ಬಂಧನ

Date:

Advertisements

ಸೆ.12 ರಂದು ಹಾಡಹಗಲೇ ಜ್ಯೂವೆಲ್ಲರಿ ಶಾಪ್‌ ಮಾಲೀಕನಿಗೆ ಗುಂಡು ಹಾರಿಸಿ ಒಂದು ಕೆಜಿಗೂ ಹೆಚ್ಚಿನ ಚಿನ್ನಾಭರಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಹೈದರಾಬಾದ್‌ಗೆ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಬ್ಯಾಡರಹಳ್ಳಿಯ ಪೈಪ್ಲೈನ್ ರಸ್ತೆ ಬಳಿಯಿರುವ ವಿನಾಯಕ ಜ್ಯೂವೆಲ್ಲರಿ ಶಾಪ್‌ಗೆ ಹುಸೇನ್, ಸಿಕಂದರ್, ಶಿವ ಹಾಗೂ ವಿಕಾಸ್ ಎಂಬ ನಾಲ್ವರು ದರೋಡೆಕೋರರು ನುಗ್ಗಿ ಮಾಲೀಕನಿಗೆ ಗುಂಡು ಹಾರಿಸಿ ಒಂದು ಕೆಜಿಗೂ ಹೆಚ್ಚಿನ ಚಿನ್ನಾಭರಣವನ್ನು ದೋಚಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸದ್ಯ ಪೊಲೀಸರು ಹೈದರಾಬಾದ್ಗೆ ವಿಮಾನ ಹತ್ತುವ ಯತ್ನದಲ್ಲಿದ್ದ ಆರೋಪಿ ಹುಸೇನ್ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಬಳಿಯಿಂದ ಪೊಲೀಸರು ಸ್ವಲ್ಪ ಪ್ರಮಾಣದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಇನ್ನುಳಿದ ಆರೋಪಿಗಳಾದ ಸಿಕಂದರ್, ಶಿವ ಹಾಗೂ ವಿಕಾಸ್ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ‌.

Advertisements

ಈ ನಾಲ್ವರು ಆರೋಪಿಗಳಿಗೆ ಜೈಲಿನಲ್ಲಿ ಪರಿಚಯವಾಗಿತ್ತು. ಸಣ್ಣಪುಟ್ಟ ಕಳ್ಳತನ ಹಾಗೂ ಕೃತ್ಯಗಳಲ್ಲಿ ತೊಡಗಿದ್ದ ಈ ಆರೋಪಿಗಳು ಒಟ್ಟಿಗೆ ಸೇರಿ ದರೋಡೆಗೆ ಸಂಚು ರೂಪಿಸಿದ್ದರು. ಪ್ಲ್ಯಾನ್ ಮಾಡಿದಂತೆಯೇ ಅ.12ರಂದು ಎರಡು ದ್ವಿಚಕ್ರ ವಾಹನಗಳಲ್ಲಿ ವಿನಾಯಕ ಜ್ಯೂವೆಲ್ಲರಿ ಶಾಪ್‌ಗೆ ಬಂದಿದ್ದರು. ಮಾಲೀಕನಿಗೆ ಗುಂಡು ಹಾರಿಸಿ ಒಂದು ಕೆಜಿಗೂ ಹೆಚ್ಚಿನ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಾಡಹಗಲೇ ಗುಂಡು ಹಾರಿಸಿ ಜ್ಯೂವೆಲ್ಲರಿ ಶಾಪ್ ಕಳ್ಳತನ

ಆರೋಪಿಗಳ ಪತ್ತೆಗೆ ಪೊಲೀಸ್‌ ಇಲಾಖೆ ನಾಲ್ವರು ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ನಾಲ್ಕು ತಂಡ ರಚನೆ ಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹುಸೇನ್ಎಂಬಾತ ಆರೋಪಿಯನ್ನು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳ ಹುಡುಕಾಟಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X