ಸಿಎಂ ಬಗ್ಗೆ ಅವಹೇಳನಕಾರಿ ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕಾರವಾರ ಗ್ರಾಮೀಣ ಪೊಲೀಸರು ಯುವ ಬ್ರಿಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸುವೋ-ಮೊಟೋ ಕೇಸು ದಾಖಲಿಸಿಕೊಂಡಿದ್ದಾರೆ.

ನಮೋ ಬ್ರಿಗೇಡ್‌ ಜನಗಣಮನ ಬೆಸೆಯೋಣ ಎಂಬ ಬೈಕ್ ಯಾತ್ರೆ ಹಮ್ಮಿಕೊಂಡಿದೆ. ಇದರ ಭಾಗವಾಗಿ ಕಾರವಾರದ ಕಡವಾಡ ಗ್ರಾಮಕ್ಕೆ ಬಂದಿದ್ದ ಚಕ್ರವರ್ತಿ ಸೂಲಿಬೆಲೆ, ಈ ವೇಳೆ ಕಾರವಾರ ತಾಲೂಕಿನ ಕಡವಾಡದ ಬೋವಿವಾಡದಲ್ಲಿರುವ ಶ್ರೀ ಆದಿ ದೇವಸ್ಥಾನಕ್ಕೂ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಸೂಲಿಬೆಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೂಲಿಬೆಲೆ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.

Advertisements

ಕಾರವಾರ ತಾಲೂಕಿನ ಕಡವಾಡದ ಬೋವಿವಾಡದಲ್ಲಿರುವ ಶ್ರೀ ಆದಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಚಕ್ರವರ್ತಿ ಸೂಲಿಬೆಲೆ , ‘ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂಗಳು ಬದುಕುವುದು ಕಷ್ಟ. ಮುಸ್ಲಿಮರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಯ ಹಸ್ತವಿದೆ’ ಎಂದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರನ್ನು ಟೀಕಿಸಿದ್ದರು.

ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಪ್ರಕರಣ ಸಂಬಂಧಿಸಿ ಹಿಂದು-ಮುಸ್ಲಿಂ ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ಹೇಳಿಕೆ ನೀಡಿದ್ದಾರೆಂಬ ಆರೋಪದ ಮೇಲೆ ಪೊಲೀಸರು ಸುವೋ-ಮೋಟೋ ಕೇಸು ದಾಖಲಿಸಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಉಪಾಧ್ಯಕ್ಷೆ ಸೌಗಂಧಿಕಾ ರಂಗನಾಥ್ ಎಂಬುವವರ ವಿರುದ್ಧ ಫೇಸ್​ಬುಕ್​ನಲ್ಲಿ ಅವಹೇಳನಕಾರಿಯಾಗಿ ಕಮೆಂಟ್​​ ಮಾಡಿದ ಆರೋಪದಡಿ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಶಿವಮೊಗ್ಗದ ವಿನೋಬಾ ನಗರ ಪೊಲೀಸ್‌ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಫೇಸ್​​ಬುಕ್​ನಲ್ಲಿ ಅವಾಚ್ಯ ಶಬ್ದದಿಂದ ನಿಂದಿಸಿದ್ದ ಆರೋಪದ ಮೇಲೆ ಸೌಂಗಧಿಕಾ ಅವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಸೂಲಿಬೆಲೆ ವಿರುದ್ಧ ಐಪಿಸಿ ಸೆಕ್ಷನ್ 504, 509ರ ಅಡಿ ಎಫ್​ಐಆರ್​ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X