ಮೈಸೂರು ದಸರಾ ಉತ್ಸವಕ್ಕೆ ಮೈಸೂರು ಒಡೆಯರ್ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಆಹ್ವಾನಿಸಿದ್ದಾರೆ.
ಶುಕ್ರವಾರ ಅರಮನೆಯಲ್ಲಿರುವ ನಿವಾಸದಲ್ಲಿ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಅಧಿಕೃತ ಆಹ್ವಾನ ನೀಡಿದ್ದಾರೆ. ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನದ ಚೆಕ್ಅನ್ನೂ ನೀಡಿದ್ದಾರೆ.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಶಾಸಕ ಶ್ರೀವತ್ಸ, ಮೇಯರ್ ಶಿವಕುಮಾರ್, ಉಪಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು, ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ, ಅರಮನೆ ಎಸಿಪಿ ಹೆಚ್.ಎಂ.ಚಂದ್ರಶೇಖರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.