ಆರಂಭಿಕ ಹಂತದಲ್ಲಿಯೇ ಶ್ವಾಸಕೋಶದ ಕ್ಯಾನ್ಸರ್ ಪತ್ತೆ ಹಚ್ಚುವ AI ಆಧಾರಿತ ತಪಾಸಣೆ (ಸ್ಕ್ರೀನಿಂಗ್) ತಂತ್ರಜ್ಞಾನವನ್ನು ಆಸ್ಟ್ರಾಜೆನಕಾ ಸಂಸ್ಥೆಯ ಸಹಯೋಗದೊಂದಿಗೆ ರಾಜ್ಯದ 19 ಜಿಲ್ಲಾ ಆಸ್ಪತ್ರೆಗಳಲ್ಲಿ ಆಳವಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಅವರು, “ಏಕಕಾಲದಲ್ಲಿ 29 ಶ್ವಾಸಕೋಶದ ಕಾಯಿಲೆಗಳನ್ನು ಪರೀಕ್ಷಿಸಲು ಈ ತಂತ್ರಜ್ಞಾನ ನೆರವಾಗಲಿದೆ. ಆರ್ಥಿಕ ಸಮಸ್ಯೆಗಳಿಂದಾಗಿ ಪ್ರಾಥಮಿಕ ಆರೈಕೆ ಪಡೆಯಲು ಸಾಧ್ಯವಾಗದೇ ಇರುವವರಿಗೆ ಇದು ಅತ್ಯಂತ ಪ್ರಯೋಜನಕಾರಿ ಆಗಲಿದೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಚಿಕಿತ್ಸಾ ವಿಧಾನಗಳನ್ನು ಅಳವಡಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯೋನ್ಮುಖವಾಗಿದೆ” ಎಂದು ಹೇಳಿದ್ದಾರೆ.