ಮಹಿಳೆಗೆ ನಡುರಸ್ತೆಯಲ್ಲೇ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿ, ಥಳಿಸಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮಲ್ಲಾಪುರ ಪಿಜಿ ನಗರದಲ್ಲಿ ನಡೆದಿದೆ.
ಗ್ರಾಮದ ಕೆಲವರು ಮಹಿಳೆಗೆ ಚಪ್ಪಲಿ ಹಾರ ಹಾಕಿ ಮಲ್ಲಾಪುರ ಘಟಪ್ರಭಾದ ಮೃತ್ಯುಂಜಯ ಸರ್ಕಲ್‌ನಲ್ಲಿ ಮಧ್ಯರಾತ್ರಿ ಮೆರವಣಿಗೆ ನಡೆಸಿದ್ದಾರೆ. ಮಹಿಳೆ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಮಹಿಳೆಯ ಮೇಲೆ ಥಳಿಸಿದ್ದಾರೆ ಎಂದು ತಿಳಿದುಬಂದಿದೆ.
ಗ್ರಾಮದ ಶ್ರೀದೇವಿ ಥಳಿತಕ್ಕೊಳಗಾದ ಮಹಿಳೆ ಎಂದು ಹೇಳಲಾಗಿದೆ. ಆಕೆ ಯಲವು ಯುವಕರನ್ನು ಹನಿ ಟ್ರ್ಯಾಪ್ ಮಾಡಿ, ಹಣ ವಸೂಲಿ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಹಲವು ಮಂದಿ ಆಕೆಯ ಮನೆ ಬಳಿ ಹೋಗಿ ಪ್ರಶ್ನಿಸಿದ್ದಾರೆ. ಈ ವೇಳೆ, ಆಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಹೇಳಲಾಗಿದೆ.
ಆಕೆಯ ನಿಂದನೆಯಿಂದ ಕೋಪಗೊಂಡು ಕೆಲವರು ಆಕೆಯನ್ನು ಮನೆಯಿಂದ ಹೊರಗೆದುಕೊಂಡು ಬಂದು ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಬಳಿಕ ಘಟಪ್ರಭಾ ಪೊಲೀಸ್ ಠಾಣೆಗೆ ಕರೆದೊಯ್ದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.
ಮಹಿಳೆಯು ಪೊಲೀಸರ ವಶದಲ್ಲಿದ್ದಾರೆ. ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ.