ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶನಿವಾರ ಸರಣಿ ಅಪಘಾತ ಸಂಭವಿಸಿದ್ದು, ಈ ವೇಳೆ ಒಂದು ಕಾರಿಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ. ನಾಲ್ಕು ಕಾರುಗಳು ಜಖಂಗೊಂಡಿವೆ.
ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತವಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರು ಸೇರಿ ನಾಲ್ಕು ಕಾರು ಜಖಂಗೊಂಡಿವೆ.
ಬೆಂಗಳೂರು ಕಡೆಯಿಂದ ಮೈಸೂರು ಕಡೆ ತೆರಳುವಾಗ ಹೆದ್ದಾರಿಯಲ್ಲಿ ಅತೀವೇಗವಾಗಿ ಬಂದ ಸಿಮೆಂಟ್ ಸಾಗಿಸುತ್ತಿದ್ದ ಲಾರಿಯೊಂದು ಹಿಂದಿನಿಂದ ವೋಕ್ಸ್ ವ್ಯಾಗನ್ ಕಾರಿಗೆ ಡಿಕ್ಕಿ ಹೊಡೆದಿದೆ.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮುಂದೆ ಚಲಿಸುತ್ತಿದ್ದ ನಾಲ್ಕು ವಾಹನಗಳಿಗೆ ವ್ಯಾಗನ್ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರ ಚಲಿಸುತ್ತಿದ್ದ ಕಾರಿಗೂ ಡಿಕ್ಕಿಯಾಗಿದೆ.
ಬಳಿಕ ವೋಕ್ಸ್ ವ್ಯಾಗನ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾರನ್ನು ಸಂಪೂರ್ಣ ಆವರಿಸಿಕ್ಕೊಳ್ಳುವಷ್ಟರಲ್ಲಿ ಸ್ಥಳೀಯರು ಕಾರಿನಲ್ಲಿದ್ದ ಬೆಂಗಳೂರಿನ ನವ ದಂಪತಿ ಯಶವಂತ್-ಯಶಸ್ವಿನಿ ಹಾಗೂ ಚಾಲಕ ರಾಘವೇಂದ್ರ ಅವರನ್ನು ರಕ್ಷಣೆ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಮೈಸೂರು ಹೆದ್ದಾರಿ | ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು
ಇನ್ನು ಶ್ರೀರಂಗಪಟ್ಟಣದಲ್ಲಿ ನಡೆಯುತ್ತಿರುವ ದಸರಾ ಪೂರ್ವ ಸಿದ್ಧತೆ ಮತ್ತು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು ತೆರಳುತ್ತಿದ್ದರು. ಅವರ ಕಾರಿಗೂ ಡಿಕ್ಕಿ ಸಂಭವಿಸಿದೆ. ಈ ಘಟನೆಯಿಂದಾಗಿ ಎಸ್‌ಪಿ ಯತೀಶ್ ಅವರು ಕಾರು ಜಖಂಗೊಂಡಿದೆ. ಹಾಗಾಗಿ, ಅದನ್ನು ಅಲ್ಲೇ ಬಿಟ್ಟು ಬೇರೊಂದು ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ.
1st time on the BLR-MYS Highway and all I can say is that we are not ready for such roads.
5/6 vehicle collision before Sri Rangapatna , easily the 5-6 th accident we’ve crossed since leaving Bangalore at 5:30AM and still haven’t reached Mysore.#Mysore #Accident #Ind #Bangalore pic.twitter.com/I6YjDU3dRO
— Umang Chordia (@iUmangChordia) October 14, 2023
ಈ ಘಟನೆ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.