ಮೈಸೂರು | ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನ ಆರೋಪ; ಭಗವಾನ್ ಮನೆಗೆ ಮುತ್ತಿಗೆ ಹಾಕಲು ಯತ್ನ

Date:

Advertisements

ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೆ.ಎಸ್‌ ಭಗವಾನ್ ಅವರ ನಿವಾಸಕ್ಕೆ ಒಕ್ಕಲಿಗ ಸಂಘದ ಸದಸ್ಯರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಮೈಸೂರಿನ ಕುವೆಂಪು ನಗರದಲ್ಲಿರುವ ಕೆ.ಎಸ್‌ ಭಗವಾನ್ ಅವರ ನಿವಾಸಕ್ಕೆ ಒಕ್ಕಲಿಗರ ಸಂಘದ ಮುಖಂಡರು ಮುತ್ತಿಗೆ ಹಾಕಲು ಯತ್ನಿಸಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶುಕ್ರವಾರ ನಡೆದ ಮಹಿಷ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಭಗವಾನ್, “ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳೆಂದು ಕುವೆಂಪು ಹೇಳಿದ್ದರು” ಎಂದಿದ್ದರು.

Advertisements

ಅವರ ಹೇಳಿಕೆಯಿಂದ ಆಕ್ರೋಶಗೊಂಡ ಒಕ್ಕಲಿಗರ ಸಂಘದ ಸದಸ್ಯರು ಭಗವಾನ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಭಗವಾನ್ ವಿರುದ್ಧ ‌ಘೋಷಣೆ ಕೂಗಿದ್ದಾರೆ.

ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, ಪ್ರತಿಭಟನಾಕಾರರು ಸ್ಥಳದಲ್ಲೇ ಧರಣಿ ನಡೆಸಿದ್ದಾರೆ. ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X