ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಒಂದಿಲ್ಲೊಂದು ಅಗ್ನಿ ಅವಘಡ, ಸರಣಿ ಅಪಘಾತಗಳು ಶನಿವಾರ ಸಂಭವಿಸಿವೆ. ಇದೀಗ ನಗರದ ಲಗ್ಗೆರೆಯಲ್ಲಿ ಟ್ರಾನ್ಸ್‌ಫಾರ್ಮರ್ ಸ್ಪೋಟಗೊಂಡು ಅಗ್ನಿ ಅವಘಡ ಸಂಭವಿಸಿದೆ.
ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡ ಪರಿಣಾಮ ಗುಜರಿ ಅಂಗಡಿಗೆ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಅಂಗಡಿ ಹೊತ್ತಿ ಉರಿದಿದೆ. ಗುಜರಿ ಅಂಗಡಿ ಬೆಂಕಿಯಲ್ಲಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಈ ಬೆಂಕಿ ಅಕ್ಕಪಕ್ಕದ ಮೂರರಿಂದ ನಾಲ್ಕು ಮನೆಗಳಿಗೂ ಆವರಿಸಿದ್ದು, ಅಪಾರ ಹಾನಿಯಾಗಿದೆ.
ಘಟನೆಯಲ್ಲಿ ಗುಜರಿ ಅಂಗಡಿ ಪಕ್ಕದಲ್ಲಿದ್ದ ಐದಾರು ಬೈಕ್ಗಳು ಭಸ್ಮವಾಗಿವೆ. ಅಲ್ಲದೇ ಭಾರೀ ಪ್ರಮಾಣದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಆದರೂ ಬೆಂಕಿ ಹತೋಟಿಗೆ ಬರುತ್ತಿಲ್ಲ.
ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸಲು ಪ್ರಯತ್ನಪಡುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಟ್ರಾನ್ಸ್ಫಾರ್ಮರ್ ಸಿಡಿದಿರುವ ಶಂಕೆ ಇದೆ.
ಈ ಸುದ್ದಿ ಓದಿದ್ದೀರಾ? ಮೈಸೂರು ದಸರಾ | ಕೆಎಸ್‌ಆರ್‌ಟಿಸಿಯಿಂದ ಪ್ರಯಾಣಿಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.