ಬಳ್ಳಾರಿ | ನಂದಿನಿ ಅಗಸರ ಅವರಿಗೆ ಜಿಲ್ಲಾಡಳಿತದಿಂದ ಸನ್ಮಾನ

Date:

Advertisements

ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ 2022ರ ಮಹಿಳೆಯರ ಹೆಪ್ಟಾಥ್ಲಾನ್ 800 ಮೀಟರ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ನಂದಿನಿ ಅಗಸರ ಅವರನ್ನು ಬಳ್ಳಾರಿ ಜಿಲ್ಲಾಡಳಿತ ಸನ್ಮಾನಿಸಿದೆ.

ನಂದಿನಿ ಅವರು ಮೂಲತಃ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದವರು. ಇತ್ತೀಚೆಗೆ ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 2022ರ ಏಷ್ಯನ್ ಗೇಮ್ಸ್‌ನಲ್ಲಿ ಹೆಪ್ಟಾಥ್ಲಾನ್ ಈವೆಂಟ್‌ನಲ್ಲಿ 800 ಮೀ. ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಯುವ ಸಬಲೀಕರಣ, ಕ್ರೀಡಾ ಸಚಿವ ಬಿ.ನಾಗೇಂದ್ರ ಅವರ ನಿರ್ದೇಶನದಂತೆ ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಂದಿನಿ ಅಗಸರ ಅವರನ್ನು ಸನ್ಮಾನಿಸಲಾಗಿದೆ.

Advertisements

“ನಮ್ಮ ಜಿಲ್ಲೆಯ ವಜ್ರದಂತಿರುವ ಮನೆ ಮಗಳು ನಂದಿನಿ ಅಗಸರ ಅವರು ಏಷ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕ್ರೀಡಾ ತರಬೇತಿಗಾಗಿ ಅವರಿಗೆ 3 ಲಕ್ಷ ರೂ. ಗೌರವಧನ ನೀಡಲಾಗುವುದು” ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

“ಕ್ರೀಡಾ ಮನೋಭಾವ ಮತ್ತು ಶ್ರೇಷ್ಠತೆಯನ್ನು ರೂಪಿಸಿಕೊಂಡಿರುವ ನಂದಿನಿ ಅವರು ಮುಂದಿನ ದಿನಗಳಲ್ಲಿ ಒಲಂಪಿಕ್ಸ್ ಕ್ರೀಡೆಗಳಲ್ಲಿ ಭಾಗವಹಿಸುವಂತಾಗಲಿ. ಇನ್ನೂ ಹೆಚ್ಚಿನ ಪದಕಗಳನ್ನು ತಮ್ಮದಾಗಿಸಿಕೊಂಡು ನಮ್ಮ ದೇಶ, ರಾಜ್ಯ ಮತ್ತು ಜಿಲ್ಲೆಗೆ ಕೀರ್ತಿ ತರಬೇಕು. ಮುಂದಿನ ಅವರ ಎಲ್ಲ ಪ್ರಯತ್ನಗಳಿಗೆ ಶುಭವಾಗಲಿ” ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.

“ಕ್ರೀಡಾ ಕ್ಷೇತ್ರಕ್ಕೆ ಪ್ರೋತ್ಸಾಹಿಸಿದ ನನ್ನ ತಂದೆ-ತಾಯಿಗೆ ಈ ಕೀರ್ತಿ ಸಲ್ಲುತ್ತದೆ. ತರಬೇತಿಯಲ್ಲಿ ಕಾಳಜಿ ಮತ್ತು ಆಸಕ್ತಿ ವಹಿಸಿ ನನಗೆ ಶಕ್ತಿ ತುಂಬಿದ ನನ್ನ ಮಾರ್ಗದರ್ಶಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಹಾಗೂ ನನ್ನನ್ನು ಗುರುತಿಸಿ ಸನ್ಮಾನಿಸಿದ ಜಿಲ್ಲಾಡಳಿತಕ್ಕೆ ಕೃತಜ್ಞತೆಗಳು” ಎಂದು ನಂದಿನಿ ಅಗಸರ ಅವರು ಹೇಳಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಉಪ ಮೇಯರ್ ಬಿ.ಜಾನಕಿ, ವಿಧಾನ ಪರಿಷತ್ ಶಾಸಕ ವೈ.ಎಂ.ಸತೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಬಳ್ಳಾರಿ ತಹಶೀಲ್ದಾರ ಗುರುರಾಜ, ಸಿರುಗುಪ್ಪ ತಹಶೀಲ್ದಾರ ವಿಶ್ವನಾಥ, ಯುವಜನ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ. ಹೊನ್ನೂರಪ್ಪ, ನಂದಿನಿ ಅವರ ತಂದೆ ಯಲ್ಲಪ್ಪ ಹಾಗೂ ಇತರರು ಇದ್ದರು.

ವರದಿ: ರಾಧಾಕೃಷ್ಣ, ಸಿಟಿಜನ್ ಜರ್ನಲಿಸ್ಟ್‌, ಬಳ್ಳಾರಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X