ಮದ್ಯದ ಅಂಗಡಿ ಪರವಾನಗಿಗೆ ಲಂಚ ಬೇಡಿಕೆ; ನಾಲ್ವರು ಲೋಕಾಯುಕ್ತ ಬಲೆಗೆ

Date:

Advertisements

ಮದ್ಯದ ಅಂಗಡಿ ಆರಂಭಕ್ಕೆ ಪರವಾನಗಿ ಕೊಡಲು ₹3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿ.ಸಿ. ಸೇರಿದಂತೆ ನಾಲ್ವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯಲ್ಲಿ ಇರುವ ಅಬಕಾರಿ ಇಲಾಖೆ ಕಚೇರಿಯಲ್ಲಿ ಆರೋಪಿ ಅಶೋಕ ಎಚ್.ಎಂ. ಲಂಚ ಸ್ವೀಕರಿಸುತ್ತಿರುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.

ದಾವಣಗೆರೆ ಜಿಲ್ಲಾ ಅಬಕಾರಿ ಡಿ.ಸಿ ಸ್ವಪ್ನ, ಪ್ರಥಮ ದರ್ಜೆ ಸಹಾಯಕ ಅಶೋಕ ಎಚ್.ಎಂ., ಹರಿಹರ ಅಬಕಾರಿ ವಲಯ ಕಚೇರಿಯ ಅಬಕಾರಿ ನಿರೀಕ್ಷಕಿ ಶೀಲಾ, ದ್ವಿತೀಯ ದರ್ಜೆ ಸಹಾಯಕಿ ಶೈಲಶ್ರೀ ಬಂಧಿತರು.

Advertisements

ಡಿ.ಜಿ. ರಘುನಾಥ ಎಂಬುವವರು ಹರಿಹರದ ಅಮರಾವತಿ ಬಳಿ ಮದ್ಯದ ಅಂಗಡಿ ಆರಂಭಿಸಲು ಅರ್ಜಿ ಹಾಕಿದ್ದರು. ಆರೋಪಿಗಳು ₹3 ಲಕ್ಷ ಲಂಚಕ್ಕೆ ಅರ್ಜಿದಾರನಿಗೆ ಬೇಡಿಕೆ ಇಟ್ಟಿದ್ದರು.

ಈ ಸುದ್ದ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ರಾಜೀವ ತಾರಾನಾಥ್ ‘ಕಮಿಷನ್’ ಪ್ರಕರಣ; ಕನ್ನಡ-ಸಂಸ್ಕೃತಿ ಇಲಾಖೆ ಸರ್ಜರಿಗೆ ಸಕಾಲ

ದಾವಣಗೆರೆ ಲೋಕಾಯುಕ್ತ ಎಸ್‌ಪಿ ಎಂ.ಎಸ್. ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ ಸಬ್‌ ಇನ್‌ಸ್ಪೆಕ್ಟರ್‌ಗಳಾದ ಪ್ರಭು ಬ. ಸೂರಿನ, ಮಧುಸೂಧನ್, ಎಚ್.ಎಸ್. ರಾಷ್ಟ್ರಪತಿ, ಹಾವೇರಿ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ ಪಂಡಿತ್ ಅವರ ನೇತೃತ್ವದಲ್ಲಿ ಕಾನ್‌ಸ್ಟೆಬಲ್‌ಗಳಾದ
ಜಂಷಿದಾ ಖಾನಂ, ಧನರಾಜ್, ವೀರೇಶಯ್ಯ, ಆಂಜನೇಯ, ಗಿರೀಶ್, ವಿನಾಯಕ, ಕೃಷ್ಣನಾಯ್ಕ, ಮೋಹನ್, ಕೋಟಿನಾಯ್ಕ, ಮಾಲತೇಶ ಅರಸೀಕೆರೆ, ಮಲ್ಲಿಕಾರ್ಜುನ, ಲಿಂಗೇಶ, ಬಸವರಾಜ, ಲಕ್ಷ್ಮವ್ವ ಅನವೇರಿ, ಹರ್ಷಿಯಾ, ಎಸ್‌.ಎಸ್.ಕಡಕೋಳ, ಮಹಾಂತೇಶ ಕಂಬಳಿ, ಮಹಾಂತೇಶ ಕಂಬಳಿ, ಸರೋಜಾ ಕಾರ್ಯಾಚರಣೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X