ನಾಡಿನ ಹೆಸರಾಂತ ಚಿಂತಕ, ಆಹಾರ ತಜ್ಞ ಕೆ.ಸಿ. ರಘು ಇನ್ನಿಲ್ಲ

Date:

Advertisements

ಕೆ.ಸಿ. ರಘು ಅವರು ನಾಡಿನ ಹೆಸರಾಂತ ಆಹಾರ ತಜ್ಞ, ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದ ಕೆ.ಸಿ.ರಘು ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಅವರಿಗೆ 60 ವರ್ಷ ವಯಸ್ಸಾಗಿತ್ತು. ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದ ಅವರು, ಇಂದು ಬೆಳಗ್ಗೆ ಬೆಂಗಳೂರಿನ ದಾಸರಹಳ್ಳಿಯ ಅಮೃತ ನಗರದಲ್ಲಿರುವ ಅವರ ನಿವಾಸದಲ್ಲಿ 7.30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪತ್ನಿ ಆಶಾ ರಘು ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಕೆ.ಸಿ.ರಘು ಅವರ ಇಚ್ಛೆಯಂತೆ ಅವರ ದೇಹವನ್ನು ಎಂ.ಎಸ್ ರಾಮಯ್ಯ ವೈದ್ಯಕೀಯ ಆಸ್ಪತ್ರೆಗೆ ದಾನ ಮಾಡಲಾಗುವುದು. ಅಂತಿಮ ಸಂದರ್ಶನ ಮಾಡಲಿಚ್ಛಿಸುವವರು ಅವರ ನಿವಾಸಕ್ಕೆ ಭೇಟಿ ನೀಡಬಹುದು ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

Advertisements

asha raghu

ವಾಗ್ಮಿಯಾಗಿಯೂ ಗುರುತಿಸಿಕೊಂಡಿದ್ದ ಕೆ ಸಿ ರಘು, ಆಹಾರ ಆರೋಗ್ಯದ ವಿಚಾರದಲ್ಲಿಅತ್ಯದ್ಭುತ ಜ್ಞಾನ ಹೊಂದಿದ್ದರು. ಆದರೆ ರಘು  ಅವರು ವಯಸ್ಸಲ್ಲದ ವಯಸ್ಸಿನಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಆಹಾರ ವಿಚಾರದಲ್ಲಿ  ಸಾಕಷ್ಟು ಸ್ಪಷ್ಟ ಮಾಹಿತಿ ನೀಡುತ್ತಿದ್ದ  ರಘು ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಕೆ ಸಿ ರಘು ಅವರು, ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

K C RAGHU Food

ಅವರೇ ಸ್ಥಾಪಿಸಿದ್ದ ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡುಹಿಡಿದು, ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸುತ್ತಿದ್ದರು. ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದರು. ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆಯಾಗಿದೆ.

ಕೆ.ಸಿ.ರಘು, ಅನೇಕ ವಿಷಯಗಳ ಆಳವಾದ ಆಸಕ್ತಿ ಮತ್ತು ಜ್ಞಾನವನ್ನು ಉಳ್ಳವರಾಗಿ ಸದಾ ಅಧ್ಯಯನದಲ್ಲಿ ತೊಡಗಿಸಿಕೊಂಡು, ಆಹಾರಕ್ಕೆ ಸಂಬಂಧಪಟ್ಟ ಲೇಖಕರಾಗಿ, ‘ಆಹಾರ ರಾಜಕೀಯ’ ಮತ್ತು ತುತ್ತು ತತ್ವ’ ಎಂಬ ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X