ದಸರಾ ವಿಶೇಷ; ಬೆಂಗಳೂರು, ಚಾಮರಾಜನಗರದಿಂದ ಮೈಸೂರಿಗೆ ಹೆಚ್ಚುವರಿ ರೈಲು

Date:

Advertisements

ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತಪ್ಪಿಸಲು ಮೈಸೂರು-ಬೆಂಗಳೂರು ಮತ್ತು ಮೈಸೂರು-ಚಾಮರಾಜನಗರ ನಿಲ್ದಾಣಗಳ ನಡುವೆ ಕಾಯ್ದಿರಿಸದ ವಿಶೇಷ ರೈಲುಗಳ ಸಂಚಾರಕ್ಕೆ ನೈರುತ್ಯ ರೈಲ್ವೆ ವಲಯವು ನಿರ್ಧರಿಸಿದೆ.

1. ರೈಲು ಸಂಖ್ಯೆ 06279/06280 ಮೈಸೂರು-ಕೆಎಸ್‌ಆರ್ ಬೆಂಗಳೂರು-ಮೈಸೂರು ಕಾಯ್ದಿರಿಸದ ವಿಶೇಷ ರೈಲು (5 ಟ್ರಿಪ್‌).

ರೈಲು ಸಂಖ್ಯೆ 06279 ಮೈಸೂರು-ಕೆಎಸ್‌ಆರ್ ಬೆಂಗಳೂರು ವಿಶೇಷ ರೈಲು ಅಕ್ಟೋಬರ್ 20 ರಿಂದ 24 ರವರೆಗೆ ರಾತ್ರಿ 11:15ಕ್ಕೆ ಮೈಸೂರು ನಿಲ್ದಾಣದಿಂದ ಹೊರಟು ಮರುದಿನ ಮಧ್ಯರಾತ್ರಿ 02:30ಕ್ಕೆ  ಕೆಎಸ್‌ಆರ್ ಬೆಂಗಳೂರು ನಿಲ್ದಾಣವನ್ನು ತಲುಪಲಿದೆ.

Advertisements

ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06280 ಕೆಎಸ್‌ಆರ್‌ ಬೆಂಗಳೂರು-ಮೈಸೂರು ವಿಶೇಷ ರೈಲು ಅಕ್ಟೋಬರ್ 21 ರಿಂದ 25 ರವರೆಗೆ ಮುಂಜಾನೆ 3 ಗಂಟೆಗೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಹೊರಟು ಅದೇ ದಿನ ಬೆಳಿಗ್ಗೆ 06:15ಕ್ಕೆ ಮೈಸೂರು ತಲುಪಲಿದೆ.

ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ನಾಗನಹಳ್ಳಿ, ಶ್ರೀರಂಗಪಟ್ಟಣ, ಪಾಂಡವಪುರ, ಚಂದ್ರಗಿರಿ ಕೊಪ್ಪಲ್ ಹಾಲ್ಟ್, ಬ್ಯಾಡ್ರಹಳ್ಳಿ, ಯಲಿಯೂರು, ಮಂಡ್ಯ, ಹನಕೆರೆ, ಮದ್ದೂರು, ಶೆಟ್ಟಿಹಳ್ಳಿ, ಚನ್ನಪಟ್ಟಣ, ರಾಮನಗರ, ಬಿಡದಿ, ಹೆಜ್ಜಾಲ, ಕೆಂಗೇರಿ ಮತ್ತು ನಾಯಂಡಹಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ವಿಶೇಷ ರೈಲುಗಳಲ್ಲಿ ಎಸಿ ಚೇರ್ ರೈಲು ಬೋಗಿ (1), ನಾನ್ ಎಸಿ ಚೇರ್ ರೈಲು ಬೋಗಿ (18) ಮತ್ತು 2ನೇ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್/ ಅಂಗವಿಕಲಸ್ನೇಹಿ ಕಂಪಾರ್ಟ್‌ಮೆಂಟ್‌ (2) ರೈಲು ಬೋಗಿ ಸೇರಿದಂತೆ ಒಟ್ಟು 21 ಬೋಗಿಗಳನ್ನು ಹೊಂದಿದೆ.

2.ರೈಲು ಸಂಖ್ಯೆ 06597/06598 ಮೈಸೂರು-ಕೆಎಸ್‌ಆರ್‌ ಬೆಂಗಳೂರು-ಮೈಸೂರು ಕಾಯ್ದಿರಿಸದ ವಿಶೇಷ ರೈಲು (5 ಟ್ರಿಪ್ಸ್).

ರೈಲು ಸಂಖ್ಯೆ 06597 ಮೈಸೂರು-ಕೆಎಸ್‌ಆರ್‌ ಬೆಂಗಳೂರು ವಿಶೇಷ ರೈಲು ಅಕ್ಟೋಬರ್ 20 ರಿಂದ 24 ರವರೆಗೆ ಮಧ್ಯಾಹ್ನ 12:15ಕ್ಕೆ ಮೈಸೂರು ನಿಲ್ದಾಣದಿಂದ ಹೊರಟು ಅದೇ ದಿನ ಮಧ್ಯಾಹ್ನ 03:30ಕ್ಕೆ ಕೆಎಸ್‌ಆರ್‌ ಬೆಂಗಳೂರು ನಿಲ್ದಾಣವನ್ನು ತಲುಪಲಿದೆ.

ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06598 ಕೆಎಸ್‌ಆರ್‌ ಬೆಂಗಳೂರು-ಮೈಸೂರು ವಿಶೇಷ ರೈಲು ಅಕ್ಟೋಬರ್ 20 ರಿಂದ 24, 2023 ರವರೆಗೆ ಮಧ್ಯಾಹ್ನ 03:45ಕ್ಕೆ ಕೆಎಸ್‌ಆರ್‌ ಬೆಂಗಳೂರು ನಿಲ್ದಾಣದಿಂದ ಹೊರಟು ಅದೇ ದಿನ ಸಂಜೆ 07:20ಕ್ಕೆ ಮೈಸೂರು ನಿಲ್ದಾಣ ತಲುಪಲಿದೆ.

ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಕೃಷ್ಣದೇವರಾಯ ಹಾಲ್ಟ್, ನಾಯಂಡಹಳ್ಳಿ, ಜ್ಞಾನ ಭಾರತಿ, ಕೆಂಗೇರಿ, ಹೆಜ್ಜಾಲ, ಬಿಡದಿ, ರಾಮನಗರ, ಚನ್ನಪಟ್ಟಣ, ಶೆಟ್ಟಿಹಳ್ಳಿ, ಮದ್ದೂರು, ಹನಕೆರೆ, ಮಂಡ್ಯ, ಯಲಿಯೂರು, ಬ್ಯಾಡರಹಳ್ಳಿ, ಚಂದ್ರಗಿರಿ ಕೊಪ್ಪಲ್ ಹಾಲ್ಟ್, ಪಾಂಡವಪುರ, ಶ್ರೀರಂಗಪಟ್ಟಣ ಮತ್ತು ನಾಗನಹಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.‌ ಈ ವಿಶೇಷ ರೈಲುಗಳು 8 ಡೆಮು ಚೇರ್‌ ಬೋಗಿಗಳನ್ನು ಹೊಂದಿರುತ್ತವೆ.

3. ರೈಲು ಸಂಖ್ಯೆ 06281/06282 ಮೈಸೂರು-ಚಾಮರಾಜನಗರ-ಮೈಸೂರು ಕಾಯ್ದಿರಿಸದ ವಿಶೇಷ ರೈಲು (1 ಟ್ರಿಪ್).

ರೈಲು ಸಂಖ್ಯೆ 06281 ಮೈಸೂರು-ಚಾಮರಾಜನಗರ ವಿಶೇಷ ರೈಲು ಅಕ್ಟೋಬರ್ 24 ರಂದು ರಾತ್ರಿ 11:30ಕ್ಕೆ ಮೈಸೂರಿನಿಂದ ಹೊರಟು ಮರುದಿನ 01:15(am)ಕ್ಕೆ ಚಾಮರಾಜನಗರ ನಿಲ್ದಾಣವನ್ನು ತಲುಪಲಿದೆ.

ಅದೇ ರೀತಿ, ಹಿಂದಿರುಗುವ ದಿಕ್ಕಿನಲ್ಲಿ ಈ ರೈಲು (06282) ಅಕ್ಟೋಬರ್ 25 ರಂದು ಬೆಳಿಗ್ಗೆ 5 ಗಂಟೆಗೆ ಚಾಮರಾಜನಗರದಿಂದ ಹೊರಟು ಅದೇ ದಿನ ಬೆಳಿಗ್ಗೆ 06:50ಕ್ಕೆ ಮೈಸೂರು ತಲುಪಲಿದೆ.

ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಚಾಮರಾಜಪುರಂ, ಅಶೋಕಪುರಂ, ಕಡಕೋಳ, ತಾಂಡವಪುರ ಹಾಲ್ಟ್, ಸುಜಾತಾಪುರಂ ಹಾಲ್ಟ್, ನಂಜನಗೂಡು ಟೌನ್, ಚಿನ್ನದಗುಡಿ ಹುಂಡಿ ಹಾಲ್ಟ್, ನರಸಾಂಬುಧಿ ಹಾಲ್ಟ್, ಕವಲಂದೆ ಹಾಲ್ಟ್, ಕೊಣನೂರು ಹಾಲ್ಟ್, ಬದನಗುಪ್ಪೆ ಹಾಲ್ಟ್ ಮತ್ತು ಮರಿಯಾಲ್ ಗಂಗವಾಡಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಈ ವಿಶೇಷ ರೈಲುಗಳಲ್ಲಿ ಸಾಮಾನ್ಯ ದ್ವಿತೀಯ ದರ್ಜೆ (13) ಮತ್ತು 2ನೇ ದರ್ಜೆ ಲಗೇಜ್ ಕಂ ಬ್ರೇಕ್ ವ್ಯಾನ್/ಅಂಗವಿಕಲ ಸ್ನೇಹಿ ಕಂಪಾರ್ಟ್‌ಮೆಂಟ್‌ (2) ಸೇರಿದಂತೆ ಒಟ್ಟು 15 ಬೋಗಿಗಳು ಇರಲಿವೆ.

4. ರೈಲು ಸಂಖ್ಯೆ 06283/06284 ಮೈಸೂರು-ಚಾಮರಾಜನಗರ-ಮೈಸೂರು ಕಾಯ್ದಿರಿಸದ ವಿಶೇಷ ರೈಲು (1 ಟ್ರಿಪ್).

ರೈಲು ಸಂಖ್ಯೆ 06283 ಮೈಸೂರು-ಚಾಮರಾಜನಗರ ವಿಶೇಷ ರೈಲು ಅಕ್ಟೋಬರ್ 24ರಂದು ರಾತ್ರಿ 09:15ಕ್ಕೆ ಮೈಸೂರಿನಿಂದ ಹೊರಟು ಅದೇ ದಿನ ರಾತ್ರಿ 11:10ಕ್ಕೆ ಚಾಮರಾಜನಗರವನ್ನು ತಲುಪಲಿದೆ.

ಹಿಂದಿರುಗುವ ದಿಕ್ಕಿನಲ್ಲಿ ಈ ರೈಲು (06284) ಅಕ್ಟೋಬರ್ 24 ರಂದು ರಾತ್ರಿ 11:30ಕ್ಕೆ ಚಾಮರಾಜನಗರದಿಂದ ಹೊರಟು ಮರುದಿನ 01:30(am) ಕ್ಕೆ ಮೈಸೂರು ತಲುಪಲಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ವಿವಿ ಸಾಗರದಿಂದ 4ನೇ ಹಂತದ ನೀರು ಬಿಡುಗಡೆ; 30 ದಿನ ತುಂಬಿ ಹರಿಯಲಿವೆ ನಾಲೆಗಳು

ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಚಾಮರಾಜಪುರಂ, ಅಶೋಕಪುರಂ,ಕಡಕೋಳ, ತಾಂಡವಪುರ ಹಾಲ್ಟ್, ಸುಜಾತಾಪುರಂ ಹಾಲ್ಟ್, ನಂಜನಗೂಡು ಟೌನ್, ಚಿನ್ನದಗುಡಿಹುಂಡಿ ಹಾಲ್ಟ್, ನರಸಾಂಬುಧಿ ಹಾಲ್ಟ್, ಕವಲಂದೆ ಹಾಲ್ಟ್, ಕೊಣನೂರು ಹಾಲ್ಟ್, ಬದನಗುಪ್ಪೆ ಹಾಲ್ಟ್ ಮತ್ತು ಮರಿಯಾಲ್ ಗಂಗವಾಡಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ವಿಶೇಷ ರೈಲುಗಳಲ್ಲಿ ಎಸಿ ಚೇರ್ ಬೋಗಿ (1), ನಾನ್ ಎಸಿ ಚೇರ್ ಬೋಗಿ ಸಿಟಿಂಗ್ (9), ಜನರಲ್ ಸೆಕೆಂಡ್ ಕ್ಲಾಸ್ (9) ಮತ್ತು 2ನೇ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್/ಅಂಗವಿಕಲ ಸ್ನೇಹಿ ಕಂಪಾರ್ಟ್‌ಮೆಂಟ್‌ (2) ಬೋಗಿ ಸೇರಿದಂತೆ 21 ಬೋಗಿಗಳು ಇರುತ್ತವೆ. ಇದರಲ್ಲಿನ ಎಸಿ ಚೇರ್ ಕಾರ್ ಬೋಗಿಗಳು ಲಾಕ್ ಸ್ಥಿತಿಯಲ್ಲಿರಲಿವೆ ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X