ಟಾಟಾ ಸುಮೋ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ನಡೆದಿದ್ದು, ಐವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ನರೇಗಲ್ ಪಟ್ಟಣದ ಬಳಿ ದುರ್ಘಟನೆ ನಡೆದಿದ್ದು, ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಒತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ಗುರುತಿಸಲಾಗಿದೆ. ಗ್ರಾಮದ ಐವರು ಟಾಟಾ ಸುಮೋದಲ್ಲಿ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಫಕ್ಕೀರೇಶ್ವರ ಮಠಕ್ಕೆ ತೆರುಳುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.
ಘಟನೆಯಲ್ಲಿ ಟಾಟಾ ಸೊಮೊದಲ್ಲಿದ್ದ ಐವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿದ್ದ ನಾಲ್ವರಿಗ ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.