ಮೇಕೆದಾಟು ಯೋಜನೆ ಶೀಘ್ರದಲ್ಲೇ ಅನುಷ್ಠಾನಗೊಳಿಸಿ: ಮೋಹನ್‌ ದಾಸರಿ

Date:

Advertisements

ಬೆಂಗಳೂರಿಗೆ ಶಾಶ್ವತ ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆ ಜಾರಿ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಬೆಂಗಳೂರಿನ ಜಲಮೂಲಗಳನ್ನು ಸಂರಕ್ಷಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್‌ ದಾಸರಿ ಒತ್ತಾಯಿಸಿದರು.

ಸೋಮವಾರ ಶಾಂತಿನಗರ ವಿಧಾನಸಭಾ ಕ್ಷೇತ್ರದ ಎಂಜಿ ರಸ್ತೆಯಲ್ಲಿ ಎಎಪಿ ಪತ್ರ ಚಳವಳಿ ಅಭಿಯಾನ ನಡೆಸಿತು. ಇದೇ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಮೋಹನ್‌ ದಸಾರಿ ಅವರು, “ತಮಿಳುನಾಡು ಸರ್ಕಾರವು ಕಾವೇರಿ ನೀರನ್ನು ಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವ ನಿರ್ಣಯವನ್ನು ಅಧಿವೇಶನದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಂಡಿದೆ. ಆದರೆ, ನಮ್ಮ ರಾಜ್ಯದಲ್ಲಿ ಸಂಕಷ್ಟ ಕಾಲದಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ನಿರ್ಣಯವನ್ನು ಕೈಗೊಳ್ಳಲು ಹಿಂದೇಟು ಹಾಕುತ್ತಿದೆ. ತಕ್ಷಣ ಸದನವನ್ನು ಕರೆದು ಬರ ಸಂಕಷ್ಟದಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ನಿರ್ಣಯವನ್ನು ಕೈಗೊಳ್ಳಬೇಕು” ಎಂದರು.

ಎಂಜಿ ರಸ್ತೆಯ ಚರ್ಚ್‌ ಸ್ಟ್ರೀಟ್‌ ಮತ್ತು ಮ್ಯೂಸಿಯಂ ಅಡ್ಡ ರಸ್ತೆಯಲ್ಲಿ ಪಕ್ಷದ ಮುಖಂಡರು ಖುದ್ದಾಗಿ ಕಾರ್ಮಿಕರು, ಆಟೋ ಚಾಲಕರು, ಕಚೇರಿ ಸಿಬ್ಬಂದಿ, ಬಿಬಿಎಂಪಿ ಸಿಬ್ಬಂದಿ ಸೇರಿದಂತೆ ಬೆಂಗಳೂರಿನ ಎಲ್ಲ ವರ್ಗದ ಜನರನ್ನು ಭೇಟಿಯಾಗಿ ಪತ್ರ ಚಳವಳಿ ನಡೆಸಿದರು. ನಾಗರಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಈ ಸಂದರ್ಭ ಪಕ್ಷದ ಮುಖಂಡರಾದ ಜಗದೀಶ್‌ ಚಂದ್ರ, ಅನಿಲ್‌ ನಾಚಪ್ಪ, ವೀಣಾ ಸರಾವ್‌, ಸುಷ್ಮಾ ವೀರ್‌, ಮಹಾಲಕ್ಷ್ಮಿ, ಫ್ರಾನ್ಸಿಸ್‌, ಶಿವಕುಮಾರ್‌, ಜ್ಯೋತಿ, ಇರ್ಷಾದ್‌ ಸೇರಿದಂತೆ ಹಲವರು ಜೊತೆಗಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸ್ನೇಹಿತರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಪೀಡಿಸಿದ ವಿಕೃತ ಪತಿ; ದೂರು ದಾಖಲು

ಅಕ್ಟೋಬರ್‌ 7ರಿಂದ ಮೇಕೆದಾಟು ಅಣೆಕಟ್ಟು ಯೋಜನೆಯ ಅನುಷ್ಠಾನಕ್ಕೆ ಆಗ್ರಹಿಸಿ ಪ್ರಧಾನಿ ಹಾಗೂ ಮುಖ್ಯಮಂತ್ರಿ ಅವರಿಗೆ ಬೆಂಗಳೂರು ನಾಗರಿಕರಿಂದ ಲಕ್ಷಾಂತರ ಸಂಖ್ಯೆಯಲ್ಲಿ ಪತ್ರ ಚಳವಳಿ ಹಾಗೂ ಜನಜಾಗೃತಿಯನ್ನು ಎಎಪಿ ನಡೆಸುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X