ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂನಲ್ಲಿ ಭಾನುವಾರ ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ತುಮಕೂರಿನ ನಿವಾಸಿಗಳಾದ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ತುಮಕೂರಿನ ಜಯನಗರದ ನಿವಾಸಿಗಳಾದ ಚನ್ನಪ್ಪ, ಮಲ್ಲರ್, ಮಣಿಕಂಠ, ಹೇಮಂತ್ ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದು, ಸೋಮವಾರದಂದು ಒಂದೇ ಕುಟುಂಬದ ಏಳು ಮಂದಿಯ ಅಂತಿಮ ಸಂಸ್ಕಾರ ನೆರವೇರಿತು.
ಹಾಲಪ್ಪ ಸಂತಾಪ
ವಿಷಯ ತಿಳಿದು ಕಾಂಗ್ರೆಸ್ ವಕ್ತಾರ ಮುರುಳೀಧರ ಹಾಲಪ್ಪ ಅವರು ಸೋಮವಾರ ಮೃತರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ಸುದ್ದಿ ಓದಿದ್ದೀರಾ? ಮಂಡ್ಯ | ಬ್ಯಾಂಕ್ ದರೋಡೆಗೆ ಯತ್ನ; ಸೆಕ್ಯೂರಿಟಿ ಗಾರ್ಡ್‌ಗೆ ಇರಿದ ದುಷ್ಕರ್ಮಿಗಳು
ಒಂದೇ ಕುಟುಂಬದ ಏಳು ಮಂದಿ ದಾರುಣ ಸಾವು ಕಂಡ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.