ಪುನೀತ್ ಸ್ಮಾರಕ ಪುನರಾಭಿವೃದ್ಧಿಗೆ ಸಿದ್ದರಾಮಯ್ಯ ಸಕಾರಾತ್ಮಕ ಸ್ಪಂದನೆ

Date:

Advertisements
  • ಪುನೀತ್ ರಾಜ್‌ಕುಮಾರ್ ಅವರ ಸಂಗ್ರಹಣೀಯ ಶಿಲ್ಪಗಳ ಅನಾವರಣ
  • ರಾಜ್‌ಕುಮಾರ್ ಕುಟುಂಬ ಎಂದಿಗೂ ಕೆಟ್ಟದ್ದನ್ನು ಬಯಸಿಲ್ಲ: ಸಿಎಂ

ಪುನೀತ್ ರಾಜ್‌ಕುಮಾರ್ ಅವರ ಸ್ಮಾರಕ ಪುನರಾಭಿವೃದ್ಧಿ ಸಂಬಂಧ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಮಾಡಿರುವ ಮನವಿಗೆ ನಮ್ಮ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಮಂಗಳವಾರ ಪಿ.ಆರ್.ಕೆ. ಸ್ಟುಡಿಯೋಸ್ ಹಾಗೂ N3K ಡಿಸೈನ್ ಸ್ಟುಡಿಯೋ ವತಿಯಿಂದ ಪ್ಯಾಲೆಸ್ ರಸ್ತೆಯ ರಾಡಿಸನ್ ಬ್ಲ್ಯೂ – ಏಟ್ರಿಯಾ ಇಲ್ಲಿ ಆಯೋಜಿಸಿರುವ ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಅವರ -ಸಂಗ್ರಹಣೀಯ ಶಿಲ್ಪಗಳನ್ನು ಅನಾವರಣಗೊಳಿಸಿ ಮಾತನಾಡಿದರು.

“ನನಗೂ ಪುನೀತ್‌ ಅವರು ಬಹಳ ಗೌರವದಿಂದ ಕಾಣುತ್ತಿದ್ದರು. ದೊಡ್ಡವರನ್ನು ಸಹಕಲಾವಿದರನ್ನು ಗೌರವದಿಂದ ಕಾಣುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದರು. ಕಿರಿಯ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿದ್ದರು. ಅವರನ್ನು ಕಳೆದುಕೊಂಡಿರುವುದು ಇಡೀ ಕರುನಾಡಿಗೆ ಆಗಿರುವ ನಷ್ಟ. ಆ ನಷ್ಟವನ್ನು ತುಂಬಲು ಸಾಧ್ಯವಿಲ್ಲ. ಉತ್ತಮ ನಟ ಹಾಗೂ ಮಾನವೀಯತೆಯುಳ್ಳ ವ್ಯಕ್ತಿಯನ್ನು ನಾಡು ಕಳೆದುಕೊಂಡಿದೆ. ಅವರ ಪ್ರತಿಮೆಯಿಂದ ಪುನೀತ್ ಅವರನ್ನು ಇನ್ನಷ್ಟು ಸ್ಮರಿಸುವ ಕೆಲಸವಾಗಿದೆ” ಎಂದರು.

Advertisements

ಕೆಟ್ಟದ್ದನ್ನು ಬಯಸಿಲ್ಲ

“ರಾಜ್‌ಕುಮಾರ್ ಕುಟುಂಬದವರು ಎಂದಿಗೂ ಕೆಟ್ಟದ್ದನ್ನು ಬಯಸಿಲ್ಲ. ಕೆಟ್ಟ ಪದ ಬಳಸಿಲ್ಲ. ಪುನೀತ್ ರಾಜಕುಮಾರ್, ಅವರ ತಂದೆ ರಾಜ್‌ಕುಮಾರ್ ಅವರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿದ್ದರು. ರಾಜ್ ಕುಮಾರ್ ಜನಪ್ರಿಯ ಮೇರು ನಟ. ಪುನೀತ್ ತೀರಿಕೊಂಡಾಗ ಜನರ ಭಾವನೆಗಳನ್ನು ಕಂಡಾಗ, ರಾಜ್ ಕುಮಾರ್ ಅವರಿಗಿಂತಲೂ ಜನಪ್ರಿಯರಾಗಿದ್ದರು ಎಂಬ ಭಾವನೆ ಬಂದಿತು. ಪುನೀತ್ ಮರಣ ಹೊಂದಿದಾಗ ನಮ್ಮ ಮನೆಯಲ್ಲಿಯೇ ಯಾರೋ ಒಬ್ಬರು ತೀರಿಕೊಂಡಿದ್ದಾರೆ ಎಂಬಂತಿತ್ತು. ಎಲ್ಲ ಊರುಗಳಲ್ಲಿ ಪ್ರತಿಮೆ ಸ್ಥಾಪಿಸಿ, ಕಟೌಟ್ ಹಾಕಿ ಗೋಳಾಡಿದ್ದು ಕಂಡಾಗ ಪುನೀತ್ ಅವರ ಜನಪ್ರಿಯತೆ, ಅಪಾರ ಅಭಿಮಾನಿಗಳನ್ನು ಪಡೆದಿದ್ದರು ಎಂದು ತಿಳಿಯುತ್ತದೆ. ಬಹಳ ಬೇಗ ನಮ್ಮನ್ನು ಅಗಲಿದರು. ಅವರು ಬದುಕಿದ್ದರೆ, ನಾವು ನಿರೀಕ್ಷೆ ಮಾಡದಷ್ಟು ಎತ್ತರಕ್ಕೆ ಬೆಳೆಯುತ್ತಿದ್ದರು” ಎಂದು ಹೇಳಿದರು.‌

ಸಿದ್ದರಾಮಯ್ಯ

ಅಪರೂಪದ ವ್ಯಕ್ತಿತ್ವ

“ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅವರ ಪ್ರತಿಮೆಯನ್ನು ಇಂದು ಅನಾವರಣ ಮಾಡಲಾಗಿದೆ. ಡಾ.ಪುನೀತ್ ರಾಜ್ ಕುಮಾರ್ ಅವರು ಅಪರೂಪದ ವ್ಯಕ್ತಿತ್ವ. ಸರಳ, ಸಜ್ಜನಿಕೆ, ವಿನಯ ಕಾಣುವುದು ವಿರಳ. ಸಾಮಾನ್ಯ ಜನರು, ಸಂಕಷ್ಟದಲ್ಲಿದವರಿಗೆ ಸ್ಪಂದಿಸುವ ಉದಾತ್ತ ಭಾವನೆಯ ಪುನೀತ್‍ರಗಿದ್ದ ಅಭಿಮಾನಿ ಬಳಗ ಬಹಳ ದೊಡ್ಡದು” ಎಂದರು.

“ರಾಜ್ಯದ ಪ್ರತಿ ಮನೆಯಲ್ಲಿಯೂ ಕೂಡ ಪುನೀತ್ ರ ಭಾವಚಿತ್ರವಿದ್ದು, ಇಂದಿಗೂ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಬಹುಶಃ ಇನ್ನೊಬ್ಬ ಪುನೀತ್ ರಂಥ ವ್ಯಕ್ತಿಯನ್ನು ಕಾಣುವುದು ಕಷ್ಟ. ರಾಜಕುಮಾರ್ ಕುಟುಂಬದವರು ಸದಾ ವಿನಯವಂತರು. ರಾಜಕುಮಾರ್, ಅವರ ಮಕ್ಕಳು ಮಾನವೀಯತೆಯ ಪ್ರತಿರೂಪವಾಗಿದ್ದಾರೆ. ಮಾನವೀಯತೆಯುಳ್ಳವರು ಮತ್ತೊಬ್ಬರನ್ನು ಪ್ರೀತಿ ಗೌರವಗಳಿಂದ ಕಾಣುತ್ತಾರೆ. ರಾಜ್ ಕುಮಾರ್ ಸೇರಿದಂತೆ ಅವರ ಕುಟುಂಬದವರೊಂದಿಗೆ ತಮಗೆ ಉತ್ತಮ ಒಡನಾಟವಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X