ಚಿತ್ರದುರ್ಗ | 5 ಗಂಟೆ ವಿದ್ಯುತ್‌ ಪೂರೈಕೆಗೆ ಬೆಸ್ಕಾಂ ಎಂ ಡಿ ಭರವಸೆ

Date:

Advertisements

ಚಿತ್ರದುರ್ಗ ಜಿಲ್ಲೆಯ ಎಲ್ಲ ಕೃಷಿ ವಲಯಗಳಿಗೆ ಪ್ರತಿದಿನ 5 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡುವುದಾಗಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ರೈತರಿಗೆ ಭರವಸೆ ನೀಡಿದರು.

ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಸ್ತುತ ಕೃಷಿ ಮಾರ್ಗಗಳಿಗೆ ವಿದ್ಯುತ್ ಸರಬರಾಜು ನೀಡುವ ಸಮಯ ಹಾಗೂ ಇತರೆ ವಿಷಯಗಳನ್ನು ಚರ್ಚಿಸುವ ಸಂಬಂಧ ಬೆಸ್ಕಾಂ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

“ಸಂಜೆ ವೇಳೆಯಲ್ಲಿ ಕೃಷಿಯ ಮಾರ್ಗಗಳಲ್ಲಿ ಬರುವ ತೋಟದ ಮನೆಗಳಿಗೆ ವಿದ್ಯುತ್‌ ವ್ಯವಸ್ಥೆಗಾಗಿ ಸಂಜೆ 6 ರಿಂದ ಬೆಳಿಗ್ಗೆ 6ರವರೆಗೆ ಸಿಂಗಲ್ ಫೇಸ್ ವಿದ್ಯುತ್ ನೀಡಲಾಗುವುದು. ಸಿಂಗಲ್ ಫೇಸ್ ಅವಧಿಯಲ್ಲಿ ಯಾವುದೇ ಕಾರಣಕ್ಕೂ ತೋಟದ ಮನೆಯ ದೀಪದ ಬಳಕೆ ಹೊರತುಪಡಿಸಿ ಯಾವುದೇ ಪಂಪ್‌ಸೆಟ್‌ಗಳಿಗೆ ಬಳಸಬಾರದು” ಎಂದು ಸೂಚಿಸಿದರು.

Advertisements

ವಿಫಲವಾದ ಪರಿವರ್ತಕಗಳನ್ನು ನಿಗದಿತ ಅವಧಿಯಲ್ಲಿ ಬದಲಾಯಿಸಲು ಮತ್ತು 11 ಕೆವಿ ಮತ್ತು ಎಲ್.ಟಿ ಮಾರ್ಗಗಳಿಗೆ ಅಡಚಣೆಯಾಗುವ ಮರಗಿಡಗಳನ್ನು ತೆರವು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಅವರು ಹಾಲಿ ವಿದ್ಯುತ್ ವ್ಯವಸ್ಥೆಯ ಬಗ್ಗೆ ಸಹಕರಿಸುವಂತೆ ಎಲ್ಲ ರೈತ ಮುಖಂಡರಿಗೆ ತಿಳಿಸಿದರು.

ಸಭೆಯಲ್ಲಿ ಬೆಸ್ಕಾಂ ನಿರ್ದೇಶಕ ಹೆಚ್ ಜೆ ರಮೇಶ್, ಚಿತ್ರದುರ್ಗ ವಲಯ ಮುಖ್ಯ ಎಂಜಿನಿಯರ್ ಗೋವಿಂದಪ್ಪ, ದಾವಣಗೆರೆ ಅಧೀಕ್ಷಕ ಎಂಜಿನಿಯರ್ ಬಿ ಎಸ್ ಜಗದೀಶ್, ಕೆಪಿಟಿಸಿಎಲ್ ಮತ್ತು ಬೆಸ್ಕಾಂ ಅಧಿಕಾರಿಗಳು ಹಾಗೂ ರೈತ ಮುಖಂಡರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X