ಚಿತ್ರದುರ್ಗ | ಕೃಷಿಗೆ ಐದು ಗಂಟೆಗಳ ಕಾಲ ವಿದ್ಯುತ್: ಬೆಸ್ಕಾಂ ಎಂ.ಡಿ

Date:

Advertisements

ಜಿಲ್ಲೆಯ ಎಲ್ಲ ಕೃಷಿ ಮಾರ್ಗಗಳಿಗೆ, ಪ್ರತಿದಿನ ಐದು ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡುಲಾಗುವುದು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ರೈತರಿಗೆ ಭರವಸೆ ನೀಡಿದರು.

ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಸ್ಕಾಂ ಅಧಿಕಾರಿಗಳು ಮತ್ತು ರೈತ ಮುಖಂಡರೊಂದಿಗೆ ಸೋಮವಾರ ಸಭೆ ನಡೆಸಿ ಅವರು ಮಾತನಾಡಿದರು.

ಸಂಜೆಯ ವೇಳೆಯಲ್ಲಿ ಕೃಷಿಯ ಲೈನ್‌ನಲ್ಲಿ ಬರುವ, ತೋಟದ ಮನೆಗಳಿಗೆ ಲೈಂಟಿಗ್ ವ್ಯವಸ್ಥೆಗಾಗಿ, ಸಂಜೆ ಆರರಿಂದ ಬೆಳಿಗ್ಗೆ ಆರರವರೆಗೆ ಸಿಂಗಲ್ ಫೇಸ್ ವಿದ್ಯುತ್ ನೀಡುವುದು. ಸಿಂಗಲ್ ಫೇಸ್ ಅವಧಿಯಲ್ಲಿ, ಯಾವುದೇ ಕಾರಣಕ್ಕೂ ತೋಟದ ಮನೆಯ ದೀಪದ ಬಳಕೆಯನ್ನು ಹೊರತುಪಡಿಸಿ ಯಾವುದೇ ಪಂಪ್ ಸೆಟ್‌ಗಳನ್ನು ಬಳಸಬಾರದು ಎಂದು ಸೂಚಿಸಿದರು.

Advertisements

ವಿಫಲವಾದ ಪರಿವರ್ತಕಗಳನ್ನು, ನಿಗಧಿತ ಅವಧಿಯಲ್ಲಿ ಬದಲಾಯಿಸಲು ಮತ್ತು 11ಕೆವಿ ಮತ್ತು ಎಲ್.ಟಿ ಮಾರ್ಗಗಳಿಗೆ ಅಡಚಣೆಯಾಗುವ ಮರಗಿಡಗಳನ್ನು ತೆರವು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಲ್ಲಾ ರೈತ ಮುಖಂಡರಿಗೆ, ಹಾಲಿ ವಿದ್ಯುತ್ ವ್ಯವಸ್ಥೆಯ ಬಗ್ಗೆ ಸಹಕರಿಸುವಂತೆ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದರು.

ಸಭೆಯಲ್ಲಿ ಬೆಸ್ಕಾಂ ನಿರ್ದೇಶಕ ಎಚ್.ಜೆ. ರಮೇಶ್, ಚಿತ್ರದುರ್ಗ ವಲಯ ಮುಖ್ಯ ಇಂಜಿನಿಯರ್ ಗೋವಿಂದಪ್ಪ, ದಾವಣಗೆರೆ ಅಧೀಕ್ಷಕ ಇಂಜಿನಿಯರ್ ಬಿ.ಎಸ್.ಜಗದೀಶ್, ಕೆಪಿಟಿಸಿಎಲ್ ಮತ್ತು ಬೆಸ್ಕಾಂ ಅಧಿಕಾರಿಗಳು, ರೈತ ಮುಖಂಡರು ಸಭೆಯಲ್ಲಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X