ಅಕ್ರಮ ಹಣ: ಕಾಂಗ್ರೆಸ್ ವಿರುದ್ದ ಬಿಜೆಪಿಯಿಂದ ಪ್ರತಿಭಟನೆ

Date:

Advertisements

ಆದಾಯ ತೆರಿಗೆ ಅಧಿಕಾರಿಗಳ ದಾಳಿಯ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಹಣ ಸಿಕ್ಕಿರುವ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಗರದ ಫ್ರೀಡಂ ಪಾರ್ಕಿನಲ್ಲಿ ಮಂಗಳವಾರ(ಅ.17) ಪ್ರತಿಭಟನೆ ನಡೆಸಿತು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವು ‘ಎ.ಟಿ.ಎಮ್.ಸರ್ಕಾರ’ ಎಂದು ಬಿಂಬಿಸುವ ಪ್ರತಿಕೃತಿಯನ್ನು ಎದುರಲ್ಲಿಟ್ಟುಕೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕರ್ನಾಟಕದ ಬಗ್ಗೆ ಇಡೀ ದೇಶ ಆಡಿಕೊಂಡು ನಗುವಂತೆ ಕಾಂಗ್ರೆಸ್ ಮಾಡಿದೆ. ಜನರಿಗೆ ಮಂಕೂಬೂದಿ ಹಾಕಿ ಕಾಂಗ್ರೆಸ್ ಸರ್ಕಾರ ಬಂತು. ಕಾಂಗ್ರೆಸ್ ಪಕ್ಷದ ರಕ್ತದಲ್ಲೇ ಭ್ರಷ್ಟಾಚಾರವಿದೆ. ಹೋಟೆಲು ಮೆನು ರೀತಿಯಲ್ಲಿ ರೇಟ್ ಲಿಸ್ಟ್ ಸರ್ಕಾರವಾಗಿದೆ. ಗುತ್ತಿಗೆದಾರರ ಬಳಿ ಸಿಕ್ಕ ಹಣದ ಹಿಂದೆ ಇರುವ ವ್ಯಕ್ತಿಗಳ ಕುರಿತು ಸಿಬಿಐ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

Advertisements

WhatsApp Image 2023 10 17 at 1.25.37 PM

ಮಾಜಿ ಸಚಿವ, ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಮಾತನಾಡಿ, ಕಾಂಗ್ರೆಸ್ ಪಕ್ಷ ಅಧಿಕಾರ ಬಂದ ದಿನದಿಂದ ಆಡಳಿತ ವೈಫಲ್ಯ ಕಂಡಿದೆ. ಜನರ ವಿರುದ್ದವಾಗಿ ಆಡಳಿತ ಮಾಡುತ್ತಿದೆ. ಇಡೀ ರಾಜ್ಯವನ್ನು ಲೂಟಿ ಭಾಗ್ಯ ಮಾಡಿದೆ. ಸ್ವಾರ್ಥ ರಾಜಕಾರಣದಿಂದ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ. ಸುಳ್ಳು ಹೇಳಿವುದರಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ನಿಸ್ಸೀಮರು. ನಾಲ್ಕು ತಿಂಗಳಲ್ಲಿ ನಲವತ್ತು ಅವತಾರ ಆಡಿದ್ದಾರೆ. ಆರೂವರೆ ಕೋಟಿ ಜನರ ಆಶಯಕ್ಕೆ ಧಕ್ಕೆ ತಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ರಾಜ್ಯಕ್ಕೆ ಬರ ಬಂದಿದೆ. ಈಗ ವಿದ್ಯುತ್ತೂ ಇಲ್ಲ. ಇದೊಂದು ದರಿದ್ರ ಸರ್ಕಾರ’ ಎಂದು ಆಕ್ರೋಶ ಹೊರಹಾಕಿದರು.

ಪ್ರತಿಭಟನೆಯಲ್ಲಿ ಶಾಸಕರಾದ ರವಿಸುಬ್ರಮಣ್ಯ, ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಗೋಪಿನಾಥ್ ರೆಡ್ಡಿ, ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಬಿಜೆಪಿ ಮುಖಂಡ ಭಾಸ್ಕರ್ ರಾವ್, ಮಾಜಿ ಮಹಾಪೌರರಾದ ಎಸ್.ಕೆ.ನಟರಾಜ್, ವಿರೋಧ ಪಕ್ಷದ ನಾಯಕರಾದ ಪದ್ಮನಾಭ ರೆಡ್ಡಿ, ನಿಕಟಪೂರ್ವ ಬಿಬಿಎಂಪಿ ಸದಸ್ಯರು, ಉಪಾಧ್ಯಕ್ಷರಾದ ಕೆ.ಉಮೇಶ್ ಶೆಟ್ಟಿರವರು ಹಾಗೂ ಜಿಲ್ಲಾಧ್ಯಕ್ಷರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X