ರಾಯಚೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಒದಗಿಸಬೇಕು ಎಂದು ಎಐಡಿಎಸ್‌ಒ ಕಾರ್ಯಕರ್ತರು ರಾಯಚೂರಿನ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
“ರಾಯಚೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಸಿಗದೆ ಪರದಾಡುವಂತಾಗಿದೆ. ಸಂಜೆ 3:30ಕ್ಕೆ ಕೇವಲ ಒಂದು ಬಸ್ ಇದ್ದು, ವಿಶ್ವವಿದ್ಯಾಲಯದಿಂದ ರಾಯಚೂರು ಬಸ್ ನಿಲ್ದಾಣಕ್ಕೆ ಹೋರಡುತ್ತದೆ. ಆದರೆ ಹಲವು ವಿದ್ಯಾರ್ಥಿಗಳ ಪ್ರಯೋಗ ತರಗತಿಗಳು (ಲ್ಯಾಬ್) ಸಂಜೆ 5:30ರವರೆಗೂ ನಡೆಯುತ್ತಿದ್ದು, 3:30ರನಂತರ ವಿಶ್ವವಿದ್ಯಾಲಯದಿಂದ ಯಾವುದೇ ಬಸ್ ಇಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ” ಎಂದರು.
“ಸಾರಿಗೆ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಸಂಜೆ 5:30ಕ್ಕೆ ಬಸ್ ಕಲ್ಪಿಸುವ ವ್ಯವಸ್ಥೆ ಮಾಡಬೇಕು. ರಾಯಚೂರು ವಿಶ್ವವಿದ್ಯಾಲಯ ನಿಲ್ದಾಣಕ್ಕೆ ಯರಗೇರಾ ಕಡೆಯಿಂದ ಬರುವ ಎಲ್ಲ ಬಸ್‌ಗಳನ್ನು ನಿಲುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ತಡವಲಗಾ ಸಮುದಾಯ ಆರೋಗ್ಯ ಕೇಂದ್ರದ ಆಡಳಿತಕ್ಕೆ ಮೆಚ್ಚುಗೆ
ಈ ಸಂದರ್ಭದಲ್ಲಿ ಎಐಡಿಎಸ್ಒ ಜಿಲ್ಲಾಧ್ಯಕ್ಷ ಹಯ್ಯಾಳಪ್ಪ, ರಾಯಚೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ವಿನೋದ್, ಮೇಘನಾ, ರಾಮು, ಮಲ್ಲಿಕಾರ್ಜುನ್, ಕ್ಯಾರೋಲಿನ್, ದೀಪಾ ಸೇರಿದಂತೆ ಬಹುತೇಕ ವಿದ್ಯಾರ್ಥಿಗಳು ಇದ್ದರು.
ವರದಿ : ಹಫೀಜುಲ್ಲ